Select Your Language

Notifications

webdunia
webdunia
webdunia
webdunia

ಜಿ20 ಶೃಂಗಸಭೆ : ಕದನ ವಿರಾಮ, ರಾಜತಾಂತ್ರಿಕತೆ ಮಾರ್ಗ ಕಂಡುಕೊಳ್ಳಬೇಕಿದೆ

ಜಿ20 ಶೃಂಗಸಭೆ : ಕದನ ವಿರಾಮ, ರಾಜತಾಂತ್ರಿಕತೆ ಮಾರ್ಗ ಕಂಡುಕೊಳ್ಳಬೇಕಿದೆ
ಜಕಾರ್ತ , ಮಂಗಳವಾರ, 15 ನವೆಂಬರ್ 2022 (11:25 IST)
ಜಕಾರ್ತ : ಉಕ್ರೇನ್ನಲ್ಲಿ ಕದನ ವಿರಾಮ ಹಾದಿಗೆ ಮರಳಲು ನಾವು ಮಾರ್ಗವೊಂದನ್ನು ಕಂಡುಕೊಳ್ಳಬೇಕಿದೆ ಎಂದು ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುನರುಚ್ಛರಿಸಿದ್ದಾರೆ.
 
ಆಹಾರ ಮತ್ತು ಇಂಧನ ಭದ್ರತೆ ಕುರಿತು ಜಿ20 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಉಕ್ರೇನ್ನಲ್ಲಿ ಕದನ ವಿರಾಮ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಲು ನಾವು ಒಂದು ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ನಾನು ಪದೇ ಪದೇ ಹೇಳುತ್ತಿದ್ದೇನೆ ಎಂದಿದ್ದಾರೆ.

ಕಳೆದ ಶತಮಾನದಲ್ಲಿ 2ನೇ ಮಹಾಯುದ್ಧವು ಜಗತ್ತಿನಲ್ಲಿ ವಿನಾಶವನ್ನುಂಟು ಮಾಡಿತು. ಅದರ ನಂತರ ಅಂದಿನ ನಾಯಕರು ಶಾಂತಿಯ ಹಾದಿಯನ್ನು ಹಿಡಿಯಲು ಗಂಭೀರ ಪ್ರಯತ್ನ ಮಾಡಿದರು.

ಈಗ ಕೋವಿಡ್ ನಂತರದ ಅವಧಿಗೆ ವಿಶ್ವಕ್ಕೆ ಹೊಸ ಕ್ರಮವನ್ನು ರಚಿಸುವ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ. ಜಗತ್ತಿನಲ್ಲಿ ಶಾಂತಿ, ಸಾಮರಸ್ಯ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಮೂಹಿಕವಾಗಿ ಸಂಕಲ್ಪ ಹೊಂದುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕಾರಣಿಗಳು ಸಂಘರ್ಷ ಹುಟ್ಟುಹಾಕುತ್ತಿದ್ದಾರೆ: ರಂಭಾಪುರಿ ಶ್ರೀ