Daily Horoscope

Select Your Language

Notifications

webdunia
webdunia
webdunia
webdunia

ಅನಿಲ ಸೋರಿಕೆ : 16 ಜನರ ದುರ್ಮರಣ!

ದುರ್ಮರಣ
ಕೇಪ್ ಟೌನ್ : ವಿಷಾನಿಲ ಸೋರಿಕೆಯಿಂದಾಗಿ ಕನಿಷ್ಠ 16 ಜನರು ದುರ್ಮರಣ ಹೊಂದಿರುವ ಘಟನೆ ದಕ್ಷಿಣ ಆಫ್ರಿಕಾದ ಜೋಹನ್ಸ್‌ಬರ್ಗ್‌ ಬೋಕ್ಸ್‌ಬರ್ಗ್‌ ಬಳಿ ನಡೆದಿದೆ.
 
ಅನಿಲ ಸೋರಿಕೆ ಶಂಕಿತ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿರಬಹುದು ಎಂದು ದಕ್ಷಿಣ ಆಫ್ರಿಕಾದ ಮಾಧ್ಯಮಗಳು ವರದಿ ಮಾಡಿವೆ. ಘಟನೆಯಲ್ಲಿ 1 ವರ್ಷದ ಮಗು ಸೇರಿದಂತೆ 16 ಜನರು ಸಾವನ್ನಪ್ಪಿದ್ದಾರೆ. ಅನಿಲ ಸೋರಿಕೆಯಿಂದಾಗಿ ಮೃತದೇಹಗಳು ಪ್ರದೇಶದಾದ್ಯಂತ ಅಲ್ಲಲ್ಲಿ ಚದುರಿದ ಸ್ಥಿತಿಯಲ್ಲಿ ಕಾಣಸಿಕ್ಕಿವೆ ಎನ್ನಲಾಗಿದೆ. 

ದುರಂತದಲ್ಲಿ 24 ಜನರು ಮೃತಪಟ್ಟಿದ್ದಾರೆ ಎಂದು ಮೊದಲಿಗೆ ವರದಿಯಾಗಿತ್ತು. ಬಳಿಕ ರಕ್ಷಣಾ ತಂಡ ಮೃತದೇಹಗಳನ್ನು ಮರುಎಣಿಕೆ ಮಾಡಿದ್ದು, ಮೃತರ ಸಂಖ್ಯೆಯನ್ನು 16 ಎಂದು ಖಚಿತಪಡಿಸಲಾಗಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ವರ್ಗಾವಣೆ ಯಾವ ಕಾರಣಕ್ಕೆ ಎಂಬ ಮಾಹಿತಿ ತರಿಸಿಕೊಳ್ತೀನಿ: ರಾಮಲಿಂಗಾ ರೆಡ್ಡಿ