Webdunia - Bharat's app for daily news and videos

Install App

ವಾಷಿಂಗ್ಟನ್ನ ಫಿನ್ಲಿಯಲ್ಲಿ ಗುಂಡಿನ ದಾಳಿ: ಮೂವರು ಸಾವು

Webdunia
ಗುರುವಾರ, 26 ಆಗಸ್ಟ್ 2021 (11:36 IST)
ಎಸೆವಿಕ್ (ಅಮೆರಿಕ), ಆ.26:  ಪೂರ್ವ ವಾಷಿಂಗ್ಟನ್ನ ಫಿನ್ಲಿಯಲ್ಲಿ ಬೆಳಗಿನ ಜಾವ 4 ಗಂಟೆಯಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪೊಲೀಸರ ಕಾರ್ಯಾಚರಣೆಯಲ್ಲಿ ದಾಳಿಕೋರನನ್ನು ಗುಂಡಿಟ್ಟು ಕೊಲ್ಲಲಾಗಿದೆ.

ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಬಂದೂಕಿನಿಂದ ಏಕಾಏಕಿ ಗುಂಡು ಹಾರಿಸಿದ್ದು, ರಸ್ತೆ ಪಕ್ಕದಲ್ಲಿ ಹೋಗುತ್ತಿದ್ದ ಮೂವರಿಗೆ ಗುಂಡು ತಾಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಕೆಲ ನಿಮಿಷದಲ್ಲೇ ಪೊಲೀಸರು ಸ್ಥಳಕ್ಕೆ ದಾವಿಸಿ ದಾಳಿಕೋರನ ಬಗ್ಗೆ ಮಾಹಿತಿ ಪಡೆದು ಟ್ರಕ್ನಲ್ಲಿ ಆರೋಪಿ ಪರಾರಿಯಾಗುತ್ತಿದ್ದಾಗ ತಡೆದು ಬಂಧಿಸಲು ಹೋದಾಗ ಆತ ಗುಂಡು ಹಾರಿಸಿದ್ದಾನೆ.
ನಂತರ ಪೊಲೀಸರು ಕೂಡ ಗುಂಡಿನ ದಾಳಿ ನಡೆಸಿ ಆತನನ್ನು ಕೊಂದಿದ್ದಾರೆ. ಬೆನ್ಟೋನ್ ಕೌಂಟ್ರಿಬಳಿ ದಾಳಿಕೋರ ಕೆಲ ಮನೆಗಳಿಗೆ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments