ಬೀಜಿಂಗ್ : ವೈರಸ್ಗಳ ಆಗರ ಎಂದೇ ಕರೆಸಿಕೊಳ್ಳುವ ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್ ಪತ್ತೆಯಾಗಿದೆ.
ಕಳೆದ ಮಾರ್ಚ್ 27 ರಂದು ಏವಿಯನ್ ಇನ್ಫ್ಲುಯೆನ್ಸಾ-ಎ ಹಕ್ಕಿಜ್ವರದ ರೀತಿಯ ವೈರಸ್) ವೈರಸ್ನಿಂದ ಬಳಲುತ್ತಿದ್ದ ಮಹಿಳೆ ಸಾವನ್ನಪ್ಪಿರುವುದು ಕಂಡುಬಂದಿದೆ. ಈ ಬಗ್ಗೆ ಪರಿಶೀಲಿಸಾಗ ಈವರೆಗೆ ಮೂರು ಪ್ರಕರಣಗಳು ಚೀನಾದಿಂದಲೇ ವರದಿಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಮುನ್ನೆಚ್ಚರಿಕೆ ಕ್ರಮಗಳೇನು?
* ಯಾವುದೇ ವಸ್ತುವನ್ನು ಮುಟ್ಟುವ ಮುನ್ನ ಕೈಗಳನ್ನು ಶುಚಿಯಾಗಿ ತೊಳೆದುಕೊಳ್ಳಬೇಕು.
* ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಅನ್ನು ಬಳಸಬೇಕು.
* ಮಾರುಕಟ್ಟೆ, ಫಾರ್ಮ್, ಪೌಲ್ಟ್ರಿಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು.