ಮಾನವ ಹಕ್ಕು ಉಲ್ಲಂಘನೆ ಸಾಬೀತು: ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

Sampriya
ಸೋಮವಾರ, 17 ನವೆಂಬರ್ 2025 (15:01 IST)
Photo Credit X
ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿ, ಗಲ್ಲು ಶಿಕ್ಷೆ ಪ್ರಕಟಿಸಿದೆ.

 ಇದು ಗರಿಷ್ಠ ಶಿಕ್ಷೆಗೆ ಅರ್ಹವಾಗಿರುವ ಪ್ರಕರಣ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಪ್ರಕಟಿಸಿದ್ದು ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ.

ಶೇಖ್ ಹಸೀನಾ ಮಾತ್ರವಲ್ಲದೇ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಕೋರ್ಟ್‌ ದೋಷಿ ಎಂದು ಹೇಳಿದೆ.

ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದಲ್ಲಿ ದೇಶವ್ಯಾಪಕವಾಗಿ ಭುಗಿಲೆದ್ದ ದಂಗೆಗಳ ಮೇಲಿನ ಮಾರಕ ದಮನಕ್ಕೆ ಹಸೀನಾ ನೇರ ಸೂಚನೆ ನೀಡಿದ್ದಾಗಿ ನ್ಯಾಯಾಲಯವು ಹೇಳಿದೆ. ಶೇಖ್ ಹಸೀನಾ ಅವರ ಈ ನಡೆಯಿಂದ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿತ್ತು. ನೂರಾರು ಪ್ರಜೆಗಳು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಶೇಖ್ ಹಸೀನಾರನ್ನು ಪ್ರಮುಖ ಆರೋಪಿಯಾಗಿಸಲಾಗಿತ್ತು.

ಈ ಆದೇಶಗಳನ್ನು ಹೊರಡಿಸುವ ಮೂಲಕ ಶೇಖ್ ಹಸೀನಾ ಮತ್ತು ಪೊಲೀಸ್ ಐಜಿ ಅವರ ನಿಷ್ಕ್ರಿಯತೆಯ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿದೆ. ಈ ಹತ್ಯೆಗಳು ಪ್ರಧಾನಿ ಶೇಖ್ ಹಸೀನಾ ಅವರ ಆದೇಶ ಮತ್ತು ಅವರ ಅರಿವುನಲ್ಲೇ ನಡೆದಿದೆ. ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್‌ ಹೇಳಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವ ಹಕ್ಕು ಉಲ್ಲಂಘನೆ ಸಾಬೀತು: ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಮುಂದಿನ ಸುದ್ದಿ
Show comments