Publish Date: Sun, 05 Dec 2021 (11:22 IST)
Updated Date: Sun, 05 Dec 2021 (11:24 IST)
ಲಕ್ನೋ : ಸಹೋದ್ಯೋಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿಯ ಕತ್ತು ಸೀಳಿ ಪತಿ ಕ್ರೂರವಾಗಿ ಕೊಂದಿರುವ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ.
ಈ ಘಟನೆಯು ಗುರುವಾರ ಬುಧಾನಾ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಖಾನೆಯ ಆವರಣದಲ್ಲಿ ನಡೆದಿದೆ. ಆರೋಪಿ ಪತಿ ಮತ್ತು ಆತನ ಪತ್ನಿ ಒಂದೇ ಟೈಲ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಕಾರ್ಖಾನೆಯ ಆವರಣದಲ್ಲಿಯೇ ವಾಸಿಸುತ್ತಿದ್ದರು.
ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಹೊಂದಿದ್ದ ಆರೋಪಿ ಗುರುವಾರ ತಡರಾತ್ರಿ ಪತ್ನಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ ಕತ್ತು ಸೀಳಿಕೊಂದಿದ್ದಾನೆ.
ಇದೀಗ ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಆತನನ್ನು ಬಂಧಿಸಿದ್ದಾರೆ ಮತ್ತು ಹತ್ಯೆಗೈಯ್ಯಲು ಆರೋಪಿ ಬಳಸಿದ್ದ ಆಯುಧಗಳನ್ನು ವಶಕ್ಕೆ ಒಡೆದುಕೊಂಡಿದ್ದಾರೆ.