Publish Date: Mon, 05 Dec 2022 (07:25 IST)
Updated Date: Mon, 05 Dec 2022 (09:27 IST)
ಪ್ಯಾರಿಸ್ : ಜಗತ್ತಿನಲ್ಲಿ ಶಾಂತಿ ಸ್ಥಾಪಿಸುವ ಸಲುವಾಗಿ ಸ್ನೇಹಿತ ನರೇಂದ್ರ ಮೋದಿ ನಮ್ಮನ್ನು ಒಟ್ಟಾಗಿ ಸೇರಿಸುತ್ತಾರೆ ಎಂದು ನಂಬುತ್ತೇನೆ ಎಂದು ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ತಿಳಿಸಿದರು.
ಭಾರತವು ಜಿ 20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಕುರಿತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಫ್ರೆಂಚ್ ಅಧ್ಯಕ್ಷ ಟ್ವೀಟ್ ಮಾಡಿದ್ದಾರೆ.
ಒಂದು ಭೂಮಿ. ಒಂದು ಕುಟುಂಬ. ಒಂದು ಭವಿಷ್ಯ. ಭಾರತವು ಜಿ-20ಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ. ಶಾಂತಿ ಮತ್ತು ಹೆಚ್ಚು ಸುಸ್ಥಿರ ಜಗತ್ತನ್ನು ನಿರ್ಮಿಸುವ ಸಲುವಾಗಿ ನನ್ನ ಸ್ನೇಹಿತ ನರೇಂದ್ರ ಮೋದಿ ಅವರು ನಮ್ಮನ್ನು ಒಟ್ಟಿಗೆ ಸೇರಿಸುತ್ತಾರೆ ಎಂದು ನಾನು ನಂಬುತ್ತೇನೆ ಎಂದು ತಿಳಿಸಿದ್ದಾರೆ.