ಟೆಹ್ರಾನ್ : ಇರಾನ್ನಲ್ಲಿ ಮಹಿಳೆಯರಿಗೆ ಕಡ್ಡಾಯ ಮಾಡಲಾಗಿರುವ ಡ್ರೆಸ್ ಕೋಡ್ ಅನ್ನು ಧಿಕ್ಕರಿಸುತ್ತಿರುವವರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ. ಮಹಿಳೆಯರು ನಿಯಮವನ್ನು ಉಲ್ಲಂಘಿಸುವುದನ್ನು ತಡೆಯಲು ಇದೀಗ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಿ, ಹಿಜಬ್ ಧರಿಸದ ಮಹಿಳೆಯರನ್ನು ಗುರುತಿಸಿ, ಬಳಿಕ ದಂಡ ವಿಧಿಸಲಾಗುತ್ತಿದೆ.
ಇರಾನ್ನಲ್ಲಿ ಈ ಕ್ರಮವನ್ನು ಹಿಜಬ್ ಕಾನೂನಿನ ವಿರುದ್ಧ ಪ್ರತಿರೋಧವನ್ನು ತಡೆಗಟ್ಟುವ ಸಲುವಾಗಿ ಕೈಗೊಳ್ಳಲಾಗುತ್ತಿದೆ. ಹಿಜಬ್ ಧರಿಸದೇ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದರೆ ಅಂತಹವರಿಗೆ ಅಧಿಕಾರಿಗಳು ದಂಡ ವಿಧಿಸುವುದರೊಂದಿಗೆ ಮುಂದೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡುತ್ತಿದ್ದಾರೆ ಎನ್ನಲಾಗಿದೆ.
ಏಳುತ್ತಲೇ ಇದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ 22 ವರ್ಷದ ಯುವತಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಹಿಜಬ್ ಅನ್ನು ಸರಿಯಾಗಿ ಧರಿಸದೇ ಇದ್ದುದಕ್ಕೆ ಯುವತಿ ಮಹ್ಸಾ ಅಮಿನಿಯನ್ನು ಪೊಲೀಸರು ಬಂಧಿಸಿದ್ದರು. ಆಕೆ ಪೊಲೀಸ್ ಕಸ್ಟಡಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಬಳಿಕ ಇರಾನ್ನಾದ್ಯಂತ ಭಾರೀ ಹಿಂಸಾಚಾರ ನಡೆದಿದೆ.