Select Your Language

Notifications

webdunia
webdunia
webdunia
webdunia

ಪ್ರಮಾಣ ವಚನಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಲಿರುವ ಇಮ್ರಾನ್ ಖಾನ್

ಪ್ರಮಾಣ ವಚನಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಲಿರುವ ಇಮ್ರಾನ್ ಖಾನ್
ಇಸ್ಲಾಮಾಬಾದ್ , ಬುಧವಾರ, 1 ಆಗಸ್ಟ್ 2018 (08:55 IST)
ಇಸ್ಲಾಮಾಬಾದ್: ಪಾಕಿಸ್ತಾನ ರಾಷ್ಟ್ರೀಯ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲಿರುವ ಇಮ್ರಾನ್ ಖಾನ್ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ಮೋದಿ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಲಿದ್ದಾರೆ ಎಂದು ವರದಿಗಳು ಬಂದಿವೆ.

ಕೆಲವು ಮೂಲಗಳ ಪ್ರಕಾರ ಪಾಕ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಲಿರುವ ಇಮ್ರಾನ್ ಖಾನ್ ಸಾರ್ಕ್ ರಾಷ್ಟ್ರಗಳ ನಾಯಕರಿಗೆ ಅದರಲ್ಲೂ ವಿಶೇಷವಾಗಿ ಸಾಂಪ್ರದಾಯಿಕ ಎದುರಾಳಿ ಭಾರತದ ಪ್ರಧಾನಿಗೆ ಆಹ್ವಾನ ನೀಡುವ ಮೂಲಕ ಹೊಸ ಸಂಚಲನ ಸೃಷ್ಟಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸೋಮವಾರವಷ್ಟೇ ಇಮ್ರಾನ್ ಖಾನ್ ಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಪ್ರಮಾಣ ವಚನ ಸಮಾರಂಭಕ್ಕೆ ಭಾರತದ ಪ್ರಧಾನಿಯನ್ನು ಆಹ್ವಾನಿಸಲು ಪಾಕ್ ನಿಯೋಜಿತ ಪ್ರಧಾನಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ವಾಟ್ಸಾಪ್ ನಲ್ಲಿ ಗ್ರೂಪ್ ವಿಡಿಯೋ ಕಾಲಿಂಗ್ ಮಾಡಬಹುದಂತೆ