ಜೈಲಿನಲ್ಲಿ ಇಮ್ರಾನ್ ಖಾನ್ ಪತ್ನಿ ಅಸ್ವಸ್ಥ

Krishnaveni K
ಶುಕ್ರವಾರ, 16 ಫೆಬ್ರವರಿ 2024 (14:57 IST)
Photo Courtesy: Twitter
ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ, ಕ್ರಿಕೆಟಿಗ ಇಮ್ರಾನ್ ಖಾನ್ ಪತ್ನಿ ಜೈಲಿನಲ್ಲಿ ಅಸ್ವಸ್ಥರಾಗಿದ್ದಾರೆ ಎಂದು ಆಕೆಯ ಸಹೋದರಿ ದೂರಿದ್ದಾರೆ.

ನನ್ನ ಸಹೋದರಿಗೆ ಜೈಲಿನಲ್ಲಿ ವಿಷಾಹಾರ ನೀಡಲಾಗುತ್ತಿದೆ. ಇದೇ ಕಾರಣಕ್ಕೆ ಆಕೆ ಅಸ್ವಸ್ಥಳಾಗಿದ್ದಾಳೆ. ಆದರೆ ಅಧಿಕಾರಿಗಳು ನಮ್ಮ ಅಳಲು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಆಕೆಯನ್ನು ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಸಹೋದರಿ ಮರ್ಯಮ್ ರಿಯಾಝ್ ದೂರಿದ್ದಾರೆ.

ಇಮ್ರಾನ್ ಅವರ ಮೂರನೇ ಪತ್ನಿ ಬುಶ್ರಾ ಬೀಬಿಗೆ ಅಕ್ರಮ ವಿವಾಹಕ್ಕಾಗಿ 14 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಸಂಬಂಧ ಅವರು ಅಡಿಯಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಜೈಲಿನಲ್ಲಿ ಆಕೆಗೆ ಸಮರ್ಪಕವಲ್ಲದ ಆಹಾರ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ನನ್ನ ಸಹೋದರಿಗೆ ಸಮರ್ಪಕವಲ್ಲದ ಆಹಾರ ನೀಡಲಾಗುತ್ತಿದೆ. ಆಕೆ ಕೆಲವು ದಿನಗಳಿಂದ ನೋವಿನಲ್ಲಿದ್ದಾಳೆ. ಕಳೆದ ಆರು ದಿನಗಳಿಂದ ಏನೂ ತಿನ್ನಲಾಗದ ಸ್ಥಿತಿಯಲ್ಲಿದ್ದಾಳೆ. ಆಕೆಗೆ ಮನೆ ಆಹಾರ ನೀಡಲೂ ನಿರಾಕರಿಸಲಾಗುತ್ತಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಮರ್ಯಮ್ ಆಗ್ರಹಿಸಿದ್ದಾರೆ.

ನನ್ನ ಸಹೋದರಿ ಯಾವತ್ತೂ ಖಾನ್ ಸಾಹಿಬ್ (ಇಮ್ರಾನ್ ಖಾನ್) ಜೊತೆಯಲ್ಲೇ ಇರುತ್ತಾಳೆ. ಯಾವತ್ತೂ ಅವರ ಕೈಬಿಡಲ್ಲ ಎಂದಿದ್ದಾರೆ. ಆಕೆಯ ಮೇಲೆ ಜೈಲಿನಲ್ಲಾಗುತ್ತಿರುವ ದೌರ್ಜನ್ಯದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments