ಜೋಹಾನ್ಸ್ ಬರ್ಗ್ : ಬ್ರಿಕ್ಸ್ ಸದಸ್ಯರ ವಿಸ್ತರಣೆಯನ್ನು ಭಾರತ ಯಾವಾಗಲೂ ಬೆಂಬಲಿಸುತ್ತದೆ ಎಂದು ಪ್ರಧಾನಿ ನರೇಂದ್ರ ಹೇಳಿದ್ದಾರೆ. ಜೋಹಾನ್ಸ್ ಬರ್ಗ್ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ ಅವರು ಆರು ಹೊಸ ಸದಸ್ಯ ರಾಷ್ಟ್ರಗಳ ಸೇರ್ಪಡೆಯನ್ನು ಘೋಷಿಸಿದ ಬಳಿಕ ಮಾತನಾಡಿದ ಅವರು, ಬ್ರಿಕ್ಸ್ ನ ಸದಸ್ಯರ ವಿಸ್ತರಣೆಯನ್ನು ಬೆಂಬಲಿಸಿದರು.