ದೆಹಲಿ: ಅರುಣಾಚಲ ಪ್ರದೇಶದ ಹಲವು ಭಾಗಗಳಿಗೆ ಚೀನಾ ಮರುನಾಮಕರಣ ಮಾಡಿರುವುದರ ವಿರುದ್ಧ ಭಾರತ ಆಕ್ರೋಶ ವ್ಯಕ್ತಪಡಿಸಿದೆ.
ಅರುಣಾಚಲ ಭಾರತದ ಅವಿಭಾಜ್ಯ ಅಂಗ ಎಂದು ವಾದಿಸುತ್ತಲೇ ಬಂದಿದೆ. ಆದರೆ ಅರುಣಾಚಲ ಪ್ರದೇಶ ನಮ್ಮದು ಎಂದು ಚೀನಾ ಖ್ಯಾತೆ ತೆಗೆಯುತ್ತಲೇ ಬಂದಿದೆ. ಇದೀಗ ಅರುಣಾಚಲ ಪ್ರದೇಶದ ಹಲವು ಭಾಗಗಳಿಗೆ ತನ್ನ ಹೆಸರು ಮರುನಾಮಕರಣ ಮಾಡಿದೆ.
ಇದಕ್ಕೆ ಭಾರತದ ವಿದೇಶಾಂಗ ಸಚಿವಾಲಯ ತೀವ್ರ ಪ್ರತಿರೋಧ ವ್ಯಕ್ತಪಡಿಸಿದೆ. ಮರುನಾಮಕರಣ ಮಾಡುವುದರಿಂದ ಅರುಣಾಚಲ ಪ್ರದೇಶ ಭಾರತದ ಭಾಗ ಎಂಬುದನ್ನು ಅಳಿಸಿಹಾಕಲಾಗದು ಎಂದು ಖಡಕ್ ಆಗಿ ಪ್ರತಿಕ್ರಿಯೆ ನೀಡಿದೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದು ಸಂದೇಶ ನೀಡಿದೆ.
ಇಂತಹ ಪ್ರಯತ್ನಗಳನ್ನು ಭಾರತ ಸಾರಾಸಗಟಾಗಿ ತಿರಸ್ಕರಿಸುತ್ತದೆ. ನಿಮ್ಮ ಮನೆಯ ಹೆಸರನ್ನು ನಾನು ಬದಲಾಯಿಸಿದರೆ ಅದುನ ನನ್ನಾಗುತ್ತದೆಯೇ? ಅದೇ ರೀತಿ ಅರುಣಾಚಲ ಪ್ರದೇಶದ ಹೆಸರು ಬದಲಾಯಿಸಿದ ಮಾತ್ರಕ್ಕೆ ಅದು ನಿಮ್ಮದಾಗುವುದಿಲ್ಲ ಎಂದು ಭಾರತ ವಿದೇಶಾಂಗ ಸಚಿವ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ.