Publish Date: Tue, 26 Dec 2017 (09:12 IST)
Updated Date: Tue, 26 Dec 2017 (09:15 IST)
ನವದೆಹಲಿ: ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.
ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ. ಶನಿವಾರ ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.
ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ