ಬ್ರಿಟನ್ ಸಂಸತ್ತಿಗೆ ಭಾರತೀಯ ಮೂಲದ ಶಿವಾನಿ ರಾಜಾ: ಭಗವದ್ಗೀತೆ ಹೆಸರಲ್ಲಿ ಪ್ರಮಾಣ ಸ್ವೀಕಾರ

Sampriya
ಗುರುವಾರ, 11 ಜುಲೈ 2024 (17:17 IST)
Photo Courtesy X
ಲಂಡನ್: ಭಾರತೀಯ ಮೂಲದ ಶಿವಾನಿ ರಾಜಾ ಅವರು ಬ್ರಿಟನ್ ಸಂಸತ್ತಿಗೆ ಆಯ್ಕೆಯಾಗಿದ್ದು, ಅವರು ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.

ಲೀಸೆಸ್ಟರ್ ಈಸ್ಟ್ ಕ್ಷೇತ್ರದಿಂದ ಶಿವಾನಿ ಅವರು ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಕಳೆದ 37 ವರ್ಷಗಳಲ್ಲಿ ಲೀಸೆಸ್ಟರ್ ಈಸ್ಟ್ ಕ್ಷೇತ್ರದಿಂದ ಆಯ್ಕೆಯಾದ ಕನ್ಸರ್ವೇಟಿವ್ ಪಕ್ಷದ ಮೊದಲ ಸಂಸದೆ ಎನಿಸಿದ್ದಾರೆ. ಬ್ರಿಟನ್ ಸಂಸತ್ತಿನಲ್ಲಿ ಜುಲೈ 10ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

'ಲೀಸೆಸ್ಟರ್ ಈಸ್ಟ್ ಕ್ಷೇತ್ರವನ್ನು ಪ್ರತಿನಿಧಿಸಿ ಸಂಸತ್ತಿಗೆ ಆಯ್ಕೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ' ಎಂದು ಗುಜರಾತ್ ಮೂಲದ ಉದ್ಯಮಿ ಶಿವಾನಿ ತಿಳಿಸಿದ್ದಾರೆ.

ಬ್ರಿಟನ್ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಭಾರತ ಮೂಲದ ಮಾಜಿ ಪ್ರಧಾನಿ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ತೀವ್ರ ಮುಖಭಂಗ ಅನುಭವಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷವನ್ನೇ ಮುಗಿಸಿಬಿಡ್ತೀನಿ ಹುಷಾರ್ ಎಂದ ಕೆಎನ್ ರಾಜಣ್ಣ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಮಾತ್ರ ಮಳೆಯ ಸೂಚನೆ

ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌: ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

ಗುಮ್ಮಾಟಾಕಾರದ ಅಂಗನವಾಡಿ ನೋಟಕ್ಕೆ ಫಿದಾ ಆದ ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments