ನವದೆಹಲಿ: ಭಾರತೀಯ ರಾಯಭಾರ ಕಚೇರಿಯ ಉನ್ನತ ಅಧಿಕಾರಿಗಳಿಗೆ ಪಾಕಿಸ್ತಾನದ ಐಎಸ್ಐ ವಿಭಾಗದ ಕೆಲವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಭಾರತ ಆಕ್ರೋಶ ವ್ಯಕ್ತಪಡಿಸಿದೆ.
ಭಾರತೀಯ ಅಧಿಕಾರಿಗಳನ್ನು ಕಾರು ಮತ್ತು ಬೈಕ್ ಗಳಲ್ಲಿ ಹಿಂಬಾಲಿಸಿ ಕಿರುಕುಳ ನೀಡುತ್ತಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಈ ಬಗ್ಗೆ ಅಲ್ಲಿನ ವಿದೇಶಾಂಗ ಇಲಾಖೆಗೆ ಪತ್ರ ಬರೆದು ಈ ಬಗ್ಗೆ ತನಿಖೆ ನಡೆಸಿ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
ಇದು 1961 ರ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದ್ದು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಭಾರತೀಯ ಅಧಿಕಾರಿಗಳಿಗೆ ಭದ್ರತೆ ನೀಡಬೇಕು ಎಂದು ಭಾರತ ಆಗ್ರಹಿಸಿದೆ.