ಟೆಲ್ ಅವೀವ್: ಅಮೆರಿಕಾ ಏರ್‌ಸ್ಟೈಕ್‌ಗೂ ಇರಾನ್ ಕ್ಯಾರೇ ಎನ್ನುತ್ತಿಲ್ಲ. ತನ್ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕಾ ಸೇನೆ ದಾಳಿ ನಡೆಸಿದ ಬೆನ್ನಲ್ಲೇ ಇಸ್ರೇಲ್ ಮೇಲಿನ ದಾಳಿಯನ್ನು ಇರಾನ್ ಮುಂದುವರಿಸಿದೆ.
ಇಸ್ರೇಲ್‌ನ ಹೈಫಾ ನಗರ, ರಾಜಧಾನಿ ಟೆಲ್ ಅವೀವ್, ಜೆರುಸಲೆಂ ಸೇರಿದಂತೆ 10ಕ್ಕೂ ಹೆಚ್ಚು ನಗರಗಳ ಮೇಲೆ ಮಿಸೈಲ್ ಮಳೆ ಸುರಿಸಿದೆ. ಮಿಸೈಲ್ ದಾಳಿಗೆ ಇಸ್ರೇಲ್‌ನ ಗಗನಚುಂಬಿ ಕಟ್ಟಡಗಳಿಗೆ ಹಾನಿಯಾಗಿದೆ. ಅಮೆರಿಕ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದೆ.
ಇರಾನ್‌ನ ಮಿಸೈಲ್‌ಗಳು ನಗರಕ್ಕೆ ಅಪ್ಪಳಿಸುತ್ತಿದ್ದಂತೆ ಇಸ್ರೇಲ್‌ನ ಕೆಲವು ಭಾಗಗಳಲ್ಲಿ ಸೈರನ್ ಮೊಳಗಿದೆ. ನಾಗರಿಕರನ್ನ ಸುರಕ್ಷಿತ ಸ್ಥಳಗಳು ಮತ್ತು ಬಂಕರ್‌ಗಳಿಗೆ ಸ್ಥಳಾಂತರಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಬಂಕರ್‌ಗಳಿಂದ ಆಚೆ ಬರದಂತೆ ಸೂಚಿಸಲಾಗಿದೆ. ನಾಗರಿಕರನ್ನು ಗುರಿಯಾಗಿಸಿ ಇರಾನ್ ನಡೆಸಿದ ಈ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇರಾನ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿದ್ದ ಯುದ್ಧದ ಮಧ್ಯಪ್ರವೇಶಿಸಿದ ಅಮೆರಿಕ, ಇರಾನ್‌ನ 3 ಪರಮಾಣು ಸ್ಥಾವರಗಳ ಮೇಲೆ ಬಾಂಬ್ ದಾಳಿ ನಡೆಸಿ, ಯಶಸ್ವಿಯಾಗಿ ನಾಶಪಡಿಸಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಚಿತಪಡಿಸಿದ್ದಾರೆ.