ಡಮಾಸ್ಕಸ್ ದಾಳಿಗೆ ಪ್ರತೀಕಾರ ತೀರಿಸಲು ಇರಾನ್‌ ಸಿದ್ಧತೆ: ಇಸ್ರೇಲ್, ಅಮೆರಿಕ ಹೈ ಅಲರ್ಟ್

Sampriya
ಶನಿವಾರ, 6 ಏಪ್ರಿಲ್ 2024 (14:21 IST)
Photo Courtesy X
ನ್ಯೂಯಾರ್ಕ್:  ಏಪ್ರಿಲ್ 2ರಂದು ನಡೆದ ಡಮಾಸ್ಕಸ್ ದಾಳಿಗೆ ಪ್ರತೀಕಾರ ತೀರಿಸಲು ಇರಾನ್ ಸಿದ್ಧತೆ ನಡೆಸಿದೆ. ಸಂಭವನೀಯ ಅಪಾಯದ ಬಗ್ಗೆ ಅಮೆರಿಕ ಹಾಗೂ ಇಸ್ರೇಲ್ ಹೈಅಲರ್ಟ್ ಘೋಷಿಸಿವೆ.

ಸಿರಿಯಾದ ಡಮಾಸ್ಕಸ್‌ನಲ್ಲಿರುವ ಇರಾನ್ ರಾಯಭಾರ ಕಚೇರಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿ, 11 ಜನರನ್ನು ಹತ್ಯೆ ಮಾಡಿತ್ತು. ಇಸ್ರೇಲ್ ದಾಳಿಗೆ ಇರಾನ್ ಪ್ರತೀಕಾರ ತೆಗೆದುಕೊಳ್ಳುವ ಸಂಭವ ದಟ್ಟವಾಗಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿನ ತನ್ನ ಮಿಲಿಟರಿ ಹಾಗೂ ರಾಯಭಾರ ಅಧಿಕಾರಿಗಳಿಗೆ ಅಮೆರಿಕ ಹೈ ಅಲರ್ಟ್ ನೀಡಿದೆ.

ರಜೆ ಮೇಲೆ ಹೋಗಿರುವ ತನ್ನ ಸೇನಾಧಿಕಾರಿಗಳನ್ನು ಇಸ್ರೇಲ್‌ ವಾಪಸ್ ಕರೆಯಿಸಿಕೊಂಡಿದ್ದು ಎಲ್ಲ ಸೇನಾ ಸಿಬ್ಬಂದಿಗೂ ರಜೆಗಳನ್ನು ರದ್ದು ಮಾಡಿದೆ. ಜಿಪಿಎಸ್ ಸಿಗ್ನಲ್‌ಗಳನ್ನು ಸ್ಥಗಿತಗೊಳಿಸಿದೆ. ತನ್ನ ಎಲ್ಲ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸಿದ್ಧವಾಗಿರಲು ಸೂಚಿಸಲಾಗಿದೆ.

ಈಚೆಗೆ ನಡೆದ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ನ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಇನ್ನೊಬ್ಬ ಉನ್ನತ ಶ್ರೇಣಿಯ ಅಧಿಕಾರಿ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ಹಾದಿ ಹಾಜಿ ರಹೀಮಿ ಹಾಗೂ ಗಾರ್ಡ್‌ನ 7 ಸದಸ್ಯರು ಮೃತರಾಗಿದ್ದರು. ನೂರಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಮೃತರ ಅಂತ್ಯಕ್ರಿಯೆ ಶುಕ್ರವಾರ ಟೆಹರಾನ್‌ನಲ್ಲಿ ನಡೆಯಿತು. ಈ ವೇಳೆ ಇರಾನ್ ಸೇನೆಯ ಉನ್ನತಾಧಿಕಾರಿಗಳು ಪ್ರತೀಕಾರದ ಶಪಥ ಮಾಡಿದ್ದಾರೆ. ಈ ವಿಚಾರದಲ್ಲಿ ಅಮೆರಿಕ ಸುಮ್ಮನಿರುವುದು ಉತ್ತಮ ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments