Webdunia - Bharat's app for daily news and videos

Install App

ಚೀನಾ ಸುಳ್ಳು ಬಯಲಾಯ್ತು?!

Webdunia
ಗುರುವಾರ, 3 ಫೆಬ್ರವರಿ 2022 (13:57 IST)
ನವದೆಹಲಿ : ಗಲ್ವಾನ್‌ ಕಣಿವೆಯಲ್ಲಿ ಭಾರತದೊಂದಿಗಿನ ಘರ್ಷಣೆಯ ವೇಳೆ ಚೀನಾ ಕಡೆಯಲ್ಲಿ ಭಾರೀ ಪ್ರಮಾಣದ ಸಾವು ನೋವು ಸಂಭವಿಸಿದೆ ಎಂದು ಆಸ್ಟ್ರೇಲಿಯಾದ ಪತ್ರಿಕೆಯೊಂದು ತನಿಖಾ ವರದಿ ಮಾಡಿದೆ.
ಚೀನಾದಲ್ಲಿನ ಮೂಲಗಳನ್ನು ಆಧಾರಿಸಿ ಆಸ್ಟ್ರೇಲಿಯಾದ ದಿ ಕ್ಲಾಕ್ಸನ್‌ನ ಪತ್ರಿಕೆ, 2020ರ ಜೂನ್ 15-16 ರ ಘರ್ಷಣೆಯ ಆರಂಭದ ಸಮಯದಲ್ಲಿ ಭಾರತೀಯ ಸೇನೆಯಿಂದ ಪಾರಾಗಲು ಗಾಲ್ವಾನ್ ನದಿಯನ್ನು ರಾತ್ರಿ ದಾಟುವ ವೇಳೆ ಕನಿಷ್ಠ 38 ಚೀನಿ ಸೈನಿಕರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪ್ರಕಟಿಸಿದೆ.

ಚೀನಾ ಬ್ಲಾಗರ್‌ಗಳು, ಚೀನಿ ನಾಗರಿಕರಿಂದ ಪಡೆದ ಮಾಹಿತಿಯನ್ನು ಆಧರಿಸಿ ಈ ಸುದ್ದಿ ಪ್ರಕಟಿಸಲಾಗಿದೆ. ಭದ್ರತಾ ಕಾರಣದಿಂದ ಚೀನಿ ಮೂಲಗಳ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಪತ್ರಿಕೆ ಹೇಳಿದೆ. 

 
ಘರ್ಷಣೆಯಲ್ಲಿ ಮಡಿದ ತನ್ನ ನಾಲ್ಕು ಸೈನಿಕರಿಗೆ ಫೆಬ್ರವರಿ 2021 ರಲ್ಲಿ ಚೀನಾ ಪದಕಗಳನ್ನು ಘೋಷಿಸಿತ್ತು. ಈ ಮೂಲಕ ಘಟನೆಯಲ್ಲಿ ನಮ್ಮ ಕಡೆಯಲ್ಲೂ ಸಾವು ನೋವು ಸಂಭವಿಸಿದೆ ಎನ್ನುವುದನ್ನು ಮೊದಲ ಬಾರಿಗೆ ಖಚಿತ ಪಡಿಸಿತ್ತು.

ಹೀಗಿದ್ದರೂ ಅಧಿಕೃತವಾಗಿ ಚೀನಾ ವರದಿ ಮಾಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಾವು ಸಂಭವಿಸಿದೆ ಎಂದು ವರದಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments