ನವದೆಹಲಿ: ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದ್ ಕಮಾಂಡರ್ ಸೆಂಟರ್ ನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ಅಲ್-ಅನ್ಸಾರ್ ಮಸೀದಿ ಮೇಲೆ ವೈಮಾನಿಕ ದಾಳಿ ನಡೆಸಿದೆ.
ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಗಾಜಾ ಜನರು ಸುರಕ್ಷತೆಗೆ ಸ್ಥಳ ಬಿಟ್ಟು ತೆರಳುವಂತೆ ಇಸ್ರೇಲ್ ಕೇಳಿಕೊಂಡಿತ್ತು. ಗಾಜಾ ವಶಪಡಿಸಿಕೊಳ್ಳುವವರೆಗೆ ಯುದ್ಧ ನಿಲ್ಲುವುದಿಲ್ಲ ಎಂದು ಇಸ್ರೇಲ್ ಅಧ್ಯಕ್ಷ ನೆತನ್ಯಾಹು ಹೇಳಿದ್ದಾರೆ.
ಹಮಾಸ್ ಉಗ್ರರು ಮಸೀದಿಯನ್ನೇ ಕಮಾಂಡ್ ಸೆಂಟರ್ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದ ಹಿನ್ನಲೆಯಲ್ಲಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ.