Webdunia - Bharat's app for daily news and videos

Install App

ಜನಸ್ಪಂದನದಲ್ಲಿ ಜನ ಜಾತ್ರೆ...!!!

Webdunia
ಶನಿವಾರ, 10 ಸೆಪ್ಟಂಬರ್ 2022 (15:50 IST)
ದೊಡ್ಡಬಳ್ಳಾಪುರ: ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶ ಆರಂಭವಾಗಲ್ಲಿದು , ಬಿಜೆಪಿ ನಾಯಕರ ಫೋಟೋಗಳು, ಕಟೌಟ್‌ಗಳು, ಕೇಸರಿ ಬಾವುಟಗಳು ರಾರಾಜಿಸುತ್ತಿವೆ.
 
ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ಕೇಂದ್ರ ಸಚಿವೆ ಸ್ಮತಿ ಇರಾನಿ ಹಾಗೂ ರಾಜ್ಯ ಬಿಜೆಪಿಯ ಎಲ್ಲ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
 
ವಿಶೇಷವಾಗಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಜಿಲ್ಲೆಗಳ ಜನರನ್ನು ಸೇರಿಸಲು ಬಿಜೆಪಿ ಯೋಜಿಸಿದ್ದು, ಸುಮಾರು 3 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನರನ್ನು ಕರೆ ತರಲು 5 ಸಾವಿರ ಬಸ್‌ಗಳಲ್ಲದೇ, ಕಾರು, ಟಿಟಿ ಸೇರಿದಂತೆ ಇತರ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ.
 
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನಪರ ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.
 
 
ಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಡಾ. ಸುಧಾಕರ್‌, ಸಚಿವ ಮುನಿರತ್ನ,ಸಚಿವ ಎಂ.ಟಿ.ಬಿ ನಾಗರಾಜ್‌ ಸಮಾವೇಶದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿದ್ದು, ಮೂವರು ಸಚಿವರು ಸಮಾವೇಶದ ಯಶಸ್ಸಿಗಾಗಿ ನಿರಂತರ ಪ್ರಯತ್ನ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments