Publish Date: Wed, 12 Oct 2022 (11:44 IST)
Updated Date: Wed, 12 Oct 2022 (11:48 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಸಿಂದ್ ಪ್ರಾಂತ್ಯದ ಹೈದರಾಬಾದ್ನಲ್ಲಿ ಹಿಂದೂ ಹುಡುಗಿಯೊಬ್ಬಳನ್ನು ಅಪಹರಿಸಿದ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿ ಹುಡುಗಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಚಂದ್ರ ಮೆಹರಾಜ್ ಎಂಬಾಕೆ ಹೈದರಾಬಾದ್ನ ಫತೇ ಚೌಕ್ನಿಂದ ಮನೆಗೆ ಮರಳುತ್ತಿದ್ದಾಗ ಅವಳನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ದೂರಿನಲ್ಲಿ ಆಕೆಯ ಪೋಷಕರು ತಿಳಿಸಿದ್ದಾರೆ. ಆದರೆ ಈವರೆಗೆ ಆಕೆ ಪತ್ತೆಯಾಗಿಲ್ಲ.
ಕೇವಲ 2 ವಾರದಲ್ಲಿ ಬೆಳಕಿಗೆ ಬಂದ 4ನೇ ಪ್ರಕರಣ ಇದಾಗಿದೆ. ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೂವರು ಮಹಿಳೆಯರನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿದ ಘಟನೆಗಳು ಪಾಕಿಸ್ತಾನದಲ್ಲಿ ಇತ್ತೀಚೆಗೆ ಹೆಚ್ಚು ಬೆಳಕಿಗೆ ಬರುತ್ತಿವೆ.
ಸೆ.24ರಂದು ಮೀನಾ ಮೇಘವಾರ್ ಎಂಬ 14 ವರ್ಷದ ಬಾಲಕಿಯನ್ನು ನಾಸರ್ಪುರ ಪ್ರದೇಶದಿಂದ ಅಪಹರಿಸಲಾಯಿತು. ಹಾಗೂ ಮಿರ್ಪುರ್ಖಾಸ್ ಪಟ್ಟಣದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮತ್ತೊಬ್ಬ ಹಿಂದೂ ಹುಡುಗಿಯನ್ನು ಅಪಹರಿಸಲಾಗಿತ್ತು.
ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿದೆ.