Webdunia - Bharat's app for daily news and videos

Install App

ಕ್ಯಾನ್ಸರ್ ನಿಂದ ಬಳಲುತ್ತಿರುವ ಬ್ರಿಟನ್ ರಾಜ ಚಾರ್ಲ್ಸ್-3

Krishnaveni K
ಮಂಗಳವಾರ, 6 ಫೆಬ್ರವರಿ 2024 (10:44 IST)
Photo Courtesy: Twitter
ಲಂಡನ್: ಬ್ರಿಟನ್ ರಾಜ ಚಾರ್ಲ್ಸ್-3 ಒಂದು ರೀತಿಯ ಕ್ಯಾನ್ಸರ್ ನಿಂದ ಬಳಲುತ್ತಿರುವುದಾಗಿ ಬಕಿಂಗ್ ಹ್ಯಾಮ್ ಅರಮನೆಯಿಂದ ಮಾಹಿತಿ ಬಂದಿದೆ.

ಚಾರ್ಲ್ಸ್-3 ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ಈ ವೇಳೆ ಅವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿದೆ.  ಇದೀಗ ವಿಶೇಷ ವೈದ್ಯರ ತಂಡ ಚಾರ್ಲ್ಸ್ ಆರೋಗ್ಯ ತಪಾಸಣೆ ನಡೆಸುತ್ತಿದೆ. ಅಲ್ಲದೆ ಸದ್ಯಕ್ಕೆ ಅವರು ಸಾರ್ವಜನಿಕರನ್ನು ಭೇಟಿ ಮಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಅರಮನೆ ವ್ಯವಹಾರಗಳಿಗೆ ಸಂಬಂಧಪಟ್ಟ ಕೆಲಸಗಳನ್ನು ಅವರು ನೋಡಿಕೊಳ್ಳಲಿದ್ದಾರೆ. ಇದರ ಹೊರತಾಗಿ ಸಾರ್ವಜನಿಕ ಭೇಟಿಗೆ ಮಾತ್ರ ನಿರ್ಬಂಧ ವಿಧಿಸಲಾಗಿದೆ. ಚಾರ್ಲ್ಸ್-3 ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶೀಘ್ರದಲ್ಲೇ ಗುಣಮುಖರಾಗಬಹುದು ಎಂದು ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಸಾರ್ವಜನಿಕರು ಆತಂಕ ಪಡುವುದು ಬೇಕಾಗಿಲ್ಲ. ಚಿಕಿತ್ಸೆ ನೀಡಿದರೆ ಈ ಕ್ಯಾನ್ಸರ್ ವಾಸಿಯಾಗಬಹುದು ಎಂದು ವೈದ್ಯರು ಭರವಸೆ ನೀಡಿದ್ದಾರೆ.

ಚಾರ್ಲ್ಸ್-3 ಗೆ ಈಗ 75 ವರ್ಷ. ಅವರ ಖಾಯಿಲೆ ಯಾವ ಹಂತದಲ್ಲಿದೆ ಎಂದು ಸ್ಪಷ್ಟನೆ ಸಿಕ್ಕಿಲ್ಲ. ಸದ್ಯಕ್ಕೆ ಕೇವಲ ವ್ಯಾವಹಾರಿಕ ಕೆಲಸಗಳನ್ನು ಮಾತ್ರ ಮಾಡುತ್ತಿದ್ದಾರೆ. ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ರಾಷ್ಟ್ರದ ಮುಖ್ಯಸ್ಥನಾಗಿ ಮಾಡಬೇಕಾದ ಕೆಲಸಗಳನ್ನು ಮಾತ್ರ ಅವರು ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments