Webdunia - Bharat's app for daily news and videos

Install App

ದಕ್ಷಿಣ ಕೊರಿಯಾದಲ್ಲಿ ಲ್ಯಾಂಡಿಂಗ್ ಗೇರ್‌ ವೈಫಲ್ಯ: ವಿಮಾನ ಪತನದಿಂದ 85ಕ್ಕೂ ಅಧಿಕ ಮಂದಿ ದುರ್ಮರಣ

Sampriya
ಭಾನುವಾರ, 29 ಡಿಸೆಂಬರ್ 2024 (10:04 IST)
Photo Courtesy X
ಸಿಯೋಲ್: 181 ಜನ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ 85ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಜಿಯೋಲ್ಲಾ ಪ್ರಾಂತ್ಯದಲ್ಲಿ ಈ ಅಪಘಾತ ಸಂಭವಿಸಿದೆ. ಜೆಜು ಏರ್ ಫ್ಲೈಟ್ 2216 ಥೈಲ್ಯಾಂಡ್‌ ರಾಜಧಾನಿ ಬ್ಯಾಂಕಾಕ್‌ನಿಂದ ಹಿಂದಿರುಗಿತ್ತು. ವಿಮಾನದಲ್ಲಿದ್ದ 181 ಜನರಲ್ಲಿ 175 ಮಂದಿ ಪ್ರಯಾಣಿಕರು ಮತ್ತು 6 ಮಂದಿ ವಿಮಾನ ಸಿಬ್ಬಂದಿ ಸೇರಿದ್ದಾರೆ. ಲ್ಯಾಂಡಿಂಗ್ ಗೇರ್‌ ಸಮಸ್ಯೆಯಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಂಡಿಂಗ್ ವಿಫಲವಾದ ಬಳಿಕ ವಿಮಾನವು ನಿಲ್ದಾಣದ ತಡೆಗೋಡೆಗೆ ಅಪ್ಪಳಿಸಿದೆ. ಇದರಿಂದ ದೊಡ್ಡ ಸ್ಫೋಟ ಸಂಭವಿಸಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಕ್ಕಿಗಳಿಗೆ ವಿಮಾನ ಡಿಕ್ಕಿಯಾದ ಪರಿಣಾಮ ಲ್ಯಾಂಡಿಂಗ್ ಗೇರ್ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ವೇಳೆ ೊಬ್ಬ ಜೀವಂತವಾಗಿ ಪತ್ತೆಯಾಗಿದ್ದಾನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments