Webdunia - Bharat's app for daily news and videos

Install App

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; ಕಲ್ಲು-ಬಂಡೆ ಉರುಳಿ 9 ಪ್ರವಾಸಿಗರು ಸಾವು!

Webdunia
ಸೋಮವಾರ, 26 ಜುಲೈ 2021 (09:50 IST)
ಹಿಮಾಚಲ ಪ್ರದೇಶ(ಜು.25): ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಸಾಂಗ್ಲಾ ಕಣಿವೆಯಲ್ಲಿರುವ ಎತ್ತರದ ಪರ್ವತದಲ್ಲಿ ಗುಡ್ಡು ಕುಸಿತ ಸಂಭವಿಸಿದೆ. ಪರಿಣಾಣ ಕಣಿವೆಗೆ ದೊಡ್ಡ ಬಂಡೆ ಕಲ್ಲುಗಳು ಉರುಳಿ ಬಿದ್ದಿವೆ. ಇದರಿಂದ 9 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

•ಹಿಮಾಚಲ ಪ್ರದೇಶದಲ್ಲಿ ಸಂಭವಿಸಿತು ಮತ್ತೊಂದು ದುರಂತ
•ಪ್ರವಾಸಿ ತಾಣದಲ್ಲಿ ಗುಡ್ಡ ಕುಸಿತ, ಪ್ರಪಾತಕ್ಕೆ ಉರುಳಿತು ಕಲ್ಲು ಬಂಡೆ
•9 ಪ್ರವಾಸಿಗರು ಸಾವು, ಮೂವರು ಗಂಭೀರ ಗಾಯ, ಸೇತುವೆ ನೀರು ಪಾಲು

ಕಿನ್ನೌರ್ ಜಿಲ್ಲೆಯ ಸಾಂಗ್ಲಿ ಕಣಿವೆಯಲ್ಲಿ ಈ ದುರಂತ ಸಂಭವಿಸಿದೆ. ಪರ್ವತದ ಮೇಲಿನಿಂದ ದೊಡ್ಡ ಬಂಡೆ ಕಲ್ಲುಗಳು ಇದ್ದಕ್ಕಿದ್ದಂತೆ ಉರುಳಿದೆ. ಕೆಳಗೆ ಹರಿಯುತ್ತಿರುವ ನದಿಯತ್ತ ಬಂಡೆಗಳು ಉರುಳಿದೆ. ನದಿ ಇತ್ತ ಕಡೆ ಇದ್ದ ಪ್ರವಾಸಿಗರು ಮೊಬೈಲ್ ಮೂಲಕ ವಿಡಿಯೋ ಸೆರೆ ಹಿಡಿದ್ದಾರೆ.
 ಕಣಿವೆಯ ಕೆಳಭಾಗ ಪ್ರಸಿದ್ದ ಪ್ರವಾಸಿ ತಾಣವಾಗಿದೆ. ಹಲವು ರೆಸಾರ್ಟ್ ಇಲ್ಲಿವೆ. ಹೀಗೆ ಆಗಮಿಸಿದವರಲ್ಲಿ 9 ಮಂದಿ ಈ ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ತಂಡವನ್ನು ನಿಯೋಜಿಸಲಾಗಿದ್ದು, ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಪ್ರವಾಸಿಗರ ಕಾರು ಸಂಪೂರ್ಣ ಪುಡಿ ಪುಡಿಯಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಅಗತ್ಯ ನೆರವು ಘೋಷಿಸಿದ್ದಾರೆ. ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ.  ತಕ್ಷಣ  ಪರಿಹಾರ ನೀಡಲು ಸೂಚಿಸಲಾಗಿದೆ. ಇದೇ ವೇಳೆ ಗಾಯಗೊಂಡವರು ಶೀಘ್ರ ಚೇತರಿಕೆಗೆ ಪಾರ್ಥಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments