Select Your Language

Notifications

webdunia
webdunia
webdunia
webdunia

ಕ್ಯಾನ್ಸರ್ ತಡೆಗಟ್ಟಲು ಮಹತ್ವದ ಯೋಜನೆ ಘೋಷಿಸಿದ ಕ್ವಾಡ್ ದೇಶಗಳ ನಾಯಕರು

US President Joe Biden

Sampriya

ಅಮೆರಿಕ , ಭಾನುವಾರ, 22 ಸೆಪ್ಟಂಬರ್ 2024 (10:09 IST)
Photo Courtesy X
ಅಮೆರಿಕ: ಕ್ವಾಡ್ ಶೃಂಗಸಭೆಯಲ್ಲಿ ಕ್ಯಾನ್ಸರ್ ಪತ್ತೆ, ಚಿಕಿತ್ಸೆ ಮತ್ತು ಅದನ್ನು ತಡೆಗಟ್ಟುವ ಸಲುವಾಗಿ ಮಹತ್ವದ ಯೋಜನೆಯೊಂದನ್ನು ಘೋಷಿಸಲಾಗಿದೆ.

ಕ್ಯಾನ್ಸರ್ ಕೊನೆಗೊಳಿಸಲು 'ಕ್ವಾಡ್ ಕ್ಯಾನ್ಸರ್ ಮೂನ್‌ಶಾಟ್' ಉಪಕ್ರಮವನ್ನು ಅನಾವರಣಗೊಳಿಸಲು ನಾನು ಹೆಮ್ಮೆಪಟ್ಟುಕೊಳ್ಳುತ್ತೇನೆ' ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದಾರೆ.

ಬೈಡನ್ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಭಾರತ ಪ್ರಧಾನಿ ನರೇಂದ್ರ ಮೋದಿ, ಕ್ಯಾನ್ಸರ್ ವಿರುದ್ಧದ ಉಪಕ್ರಮವನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಕ್ಯಾನ್ಸರ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕ್ವಾಡ್ ರಾಷ್ಟ್ರಗಳ ನಾಯಕರು ಬದ್ಧತೆ ಪ್ರದರ್ಶಿಸಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. ಇಂಡೋ-ಪೆಸಿಫಿಕ್‌ನಲ್ಲಿ ಪ್ರತಿ ವರ್ಷ 1.5 ಲಕ್ಷ ಮಹಿಳೆಯರು ಇದರಿಂದಾಗಿ ಸಾವಿಗೀಡಾಗುತ್ತಿದ್ದಾರೆ. ಇದನ್ನು ಮುಂದುವರಿಯಲು ನಾವು ಬಿಡುವುದಿಲ್ಲ ಎಂದು  ತಿಳಿಸಿದ್ದಾರೆ.

ಅಮೆರಿಕ, ಭಾರತ, ಆಸ್ಟ್ರೇಲಿಯಾ, ಜಪಾನ್ ನಾವೆಲ್ಲರೂ ಸೇರಿ ಪ್ರತಿಯೊಬ್ಬ ಕ್ಯಾನ್ಸರ್ ರೋಗಿಯ ಹೋರಾಟ ಹಾಗೂ ಆರೈಕೆಗೆ ನೆರವಾಗಲಿದ್ದೇವೆ. ಕ್ಯಾನ್ಸರ್ ಅನ್ನು ಸೋಲಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ' ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿನ್ನೆ ಆತಂಕ ಸೃಷ್ಟಿಸಿದ್ದ ದಸರಾ ಆನೆಗಳು ಇಂದು ತಾಲೀಮಿನಲ್ಲಿ ಫುಲ್ ಸೈಲೆಟ್‌