ವೆಲ್ಲಿಂಗ್ಟನ್ : ನ್ಯೂಜಿಲೆಂಡ್ನ ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪಗಳ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 7.1 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಭೂಕಂಪ ಭೂಮಿಯಿಂದ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಭಾರೀ ಭೂಕಂಪ ಉಂಟಾದ ತಕ್ಷಣ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪ ಸಂಭವಿಸಿದ 300 ಕಿಮೀ ವ್ಯಾಪ್ತಿಯ ಪ್ರದೇಶದೊಳಗೆ ಸುನಾಮಿಯ ಭೀತಿಯಿದೆ.
ಸದ್ಯ ಈ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಭೂಕಂಪದ ಬಳಿಕ ರಾಷ್ಟ್ರೀಯ ತುರ್ತು ನಿರ್ವಹಣಾ ಏಜೆನ್ಸಿ ನ್ಯೂಜಿಲೆಂಡ್ಗೆ ಯಾವುದೇ ಸುನಾಮಿಯ ಭೀತಿ ಇಲ್ಲ ಎಂದು ತಿಳಿಸಿದೆ.