ಬರ್ನ್ : ಗೂಗಲ್ ಕಂಪನಿ ಉದ್ಯೋಗಿಗಳ ಸಾಮೂಹಿಕ ವಜಾ ಮುಂದುವರಿಸಿದ್ದು, ಇದೀಗ 200 ಉದ್ಯೋಗಿಗಳನ್ನು ವಜಾಗೊಳಿಸಿರುವ ಹಿನ್ನೆಲೆ ಸ್ವಿಟ್ಜರ್ಲೆಂಡ್ನ ಜ್ಯೂರಿಯಲ್ಲಿರುವ ಕಂಪನಿಯ ಕಚೇರಿಯಲ್ಲಿ ಉದ್ಯೋಗಿಗಳು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆ ನಡೆಸಿದ್ದಾರೆ.
ಗೂಗಲ್ನ ಮೂಲ ಕಂಪನಿ ಆಲ್ಫಾಬೆಟ್ ಜನವರಿಯಲ್ಲಿ ಪ್ರಪಂಚದಾದ್ಯಂತ ಸುಮಾರು 12,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿತ್ತು. ಇದು ಜಾಗತಿಕವಾಗಿ ಶೇ.9 ರಷ್ಟು ಕಂಪನಿಯ ಉದ್ಯೋಗಿಗಳಿಗೆ ಸಮವಾದ ಸಂಖ್ಯೆಯಾಗಿದೆ. ಇದೀಗ ಗೂಗಲ್ ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ.
ಸುಮಾರು 5,000 ಉದ್ಯೋಗಿಗಳಿರುವ ಗೂಗಲ್ನ ಜ್ಯೂರಿ ಕಚೇರಿಯಲ್ಲಿ ಕಳೆದ ತಿಂಗಳು ಉದ್ಯೋಗಿಗಳನ್ನು ಕಡಿತಗೊಳಿಸುವುದರ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ವಜಾಗೊಳ್ಳುತ್ತಿರುವ ಉದ್ಯೋಗಿಗಳಿಗೆ ಬೆಂಬಲಿಸಿ ಇತರ ಉದ್ಯೋಗಿಗಳು ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ.