Webdunia - Bharat's app for daily news and videos

Install App

ಮ್ಯಾನ್ಮಾರ್, ಥಾಯ್ಲೆಂಡ್‌ನಲ್ಲಿ ಭೀಕರ​ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ, ಬಗೆದಷ್ಟು ಸಿಗುತ್ತಿವೆ ಮೃತದೇಹಗಳು

Sampriya
ಭಾನುವಾರ, 30 ಮಾರ್ಚ್ 2025 (09:52 IST)
Photo Courtesy X
ಮ್ಯಾನ್ಮಾರ್​​: ಪ್ರಬಲ ಭೂಕಂಪಕ್ಕೆ ಮ್ಯಾನ್ಮಾರ್ ಹಾಗೂ ಥಾಯ್ಲೆಂಡ್​ ಅಕ್ಷರಶಃ ತತ್ತರಿಸಿದೆ. ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಭಾನುವಾರ ಮೃತರ ಸಂಖ್ಯೆ 1700 ದಾಟಿದೆ.

ದುರ್ಘಟನೆಯಲ್ಲಿ 3400 ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಹಾಗೂ ಗಾಯಾಳುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಶುಕ್ರವಾರ ಮಧ್ಯಾಹ್ನ 7.7 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದ್ದರಿಂದ ಹಲವಾರು ಕಟ್ಟಡಗಳು, ಸೇತುವೆಗಳು ನೆಲಸಮವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮ್ಯಾನ್ಮಾರ್‌ನಲ್ಲಿ ಕನಿಷ್ಠ 1,700 ಜನರು ಸಾವನ್ನಪ್ಪಿದ್ದು, 3,400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕನಿಷ್ಠ 139 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಬ್ಯಾಂಕಾಕ್‌ನಲ್ಲಿ ಸುಮಾರು 10 ಸಾವುಗಳು ದೃಢಪಟ್ಟಿವೆ.

ರಕ್ಷಣಾ ಕಾರ್ಯಕರ್ತರು ಕುಸಿದ ಕಟ್ಟಡಗಳ ಅವಶೇಷಗಳನ್ನು ಅಗೆದು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸಂವಹನ ವ್ಯವಸ್ಥೆ ಕಡಿತವಾಗಿರುವುದರಿಂದ ವಿಪತ್ತಿನ ನಿಜವಾದ ಪ್ರಮಾಣ ನಿಧಾನವಾಗಿ ಗೊತ್ತಾಗುತ್ತಿದೆ. ಸಾವಿನ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments