Select Your Language

Notifications

webdunia
webdunia
webdunia
webdunia

ಪಾಕಿಸ್ತಾನದಲ್ಲಿ ಅಪ್ರಾಪ್ತ ಹಿಂದು ಬಾಲಕಿಯರನ್ನು ಒತ್ತಾಯಪೂರ್ವಕವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ

ಪಾಕಿಸ್ತಾನದಲ್ಲಿ ಅಪ್ರಾಪ್ತ ಹಿಂದು ಬಾಲಕಿಯರನ್ನು ಒತ್ತಾಯಪೂರ್ವಕವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ
ನವದೆಹಲಿ , ಶುಕ್ರವಾರ, 29 ಜನವರಿ 2016 (20:38 IST)
ಮುಸ್ಲಿಂ ಜಾತ್ಯಾತೀತ ರಾಷ್ಟ್ರ ಸ್ಥಾಪಿಸಬೇಕು ಎನ್ನುವ ಮೊಹಮ್ಮದ್ ಅಲಿ ಜಿನ್ನಾ ಕನಸು ಕನಸಾಗಿಯೇ ಉಳಿದಿದೆ.ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವ ಬದಲಿಗೆ ನಿರಂತರ ಬೆದರಿಕೆಯೊಡ್ಡುತ್ತಿರುವ ಘಟನೆಗಳು ಬಹಿರಂಗವಾಗುತ್ತಿವೆ.
 
ಬಿಬಿಸಿ ಉರ್ದು ಮಾಧ್ಯಮದ ಪ್ರಕಾರ, ಅಪ್ರಾಪ್ತ ಹಿಂದೂ ಬಾಲಕಿಯರನ್ನು ಅಪಹರಿಸಿ ಒತ್ತಾಯಪೂರ್ವಕವಾಗಿ ಅವರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ನಂತರ ವಿವಾಹ ಮಾಡಿಕೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ ಎಂದು ವರದಿ ಮಾಡಿದೆ. 
 
ಪಾಕಿಸ್ತಾನದಲ್ಲಿ ಒಟ್ಟು 80 ಲಕ್ಷ ಹಿಂದೂಗಳಿದ್ದು, ಸಿಂಧ ಪ್ರಾಂತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಿಂಧ ಪ್ರಾಂತ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರಿಂದ ಇಂತಹ ಕ್ರೂರ, ಅಮಾನವೀಯ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. 
 
ಪ್ರತಿನಿತ್ಯ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಪ್ರಧಾನಿ ನವಾಜ್ ಷರೀಫ್ ನೇತೃತ್ವದ ಸರಕಾರ ಮೂಕಪ್ರೇಕ್ಷಕವಾಗಿ ಎಂದು ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada