ಹಣ ವರ್ಗಾವಣೆ ಪ್ರಕರಣ : ಡೊನಾಲ್ಡ್ ಟ್ರಂಪ್ ಬಂಧನ

Webdunia
ಬುಧವಾರ, 5 ಏಪ್ರಿಲ್ 2023 (14:07 IST)
ನ್ಯೂಯಾರ್ಕ್ : ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದಾರೆ.
 
ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ ಟ್ರಂಪ್ ಶರಣಾದರು. ಬಳಿಕ ಅವರನ್ನು ಬಂಧಿಸಿದ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು.

ಈ ವೇಳೆ ಟ್ರಂಪ್ ವಿರುದ್ಧ ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದು, ಸೇರಿದಂತೆ ಹಣ ವಂಚನೆಯ 34 ದೋಷಾರೋಪಗಳನ್ನು ಹೊರಿಸಲಾಯಿತು. ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್, ನಾನು ತಪ್ಪು ಮಾಡಿಲ್ಲ. 34 ಆರೋಪಗಳಲ್ಲಿ ನಾನು ನಿರಪರಾಧಿ ಎಂದಿದ್ದಾರೆ.

ಸುಮಾರು ಒಂದು ಗಂಟೆ ಕಾಲ ವಿಚಾರಣೆ ನಡೆಯಿತು. ವಿಚಾರಣೆಯ ನಂತರ ಟ್ರಂಪ್, ತಮ್ಮ ವಾಹನದಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು. ಈ ಮೂಲಕ ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್ ಆರೋಪ ಪ್ರಕರಣದ ವಿಚಾರಣೆ ಎದುರಿಸಿ ಬಂಧನಕ್ಕೆ ಒಳಗಾದ ಮೊದಲ ಅಮೆರಿಕದ ಮಾಜಿ ಅಧ್ಯಕ್ಷರಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ