ನ್ಯೂಯಾರ್ಕ್ : ವಿಶ್ವದ ನಂಬರ್ ಒನ್ ಶ್ರೀಮಂತರಾಗಿ ಖ್ಯಾತಿ ಗಳಿಸಿದ್ದ ಟೆಸ್ಲಾ ಕಂಪನಿ ಮಾಲೀಕ ಎಲೋನ್ ಮಸ್ಕ್ ಈಗ ಆ ಸ್ಥಾನವನ್ನು ಕಳೆದುಕೊಂಡಿದ್ದಾರೆ.
ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮಸ್ಕ್ ಎರಡನೇ ಸ್ಥಾನಕ್ಕೆ ಕುಸಿದಿದ್ದು, 1ನೇ ಸ್ಥಾನವನ್ನು ಬರ್ನಾರ್ಡ್ ಅರ್ನಾಲ್ಟ್ ಅಲಂಕರಿಸಿದ್ದಾರೆ.
ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, 51 ವರ್ಷದ ಎಲೋನ್ ಮಸ್ಕ್ ಒಟ್ಟು 178.6 ಬಿಲಿಯನ್ ಡಾಲರ್ ನಿವ್ವಳ ಮೌಲ್ಯ ಹೊಂದಿದ್ದಾರೆ.
188.6 ಬಿಲಿಯನ್ ಡಾಲರ್ ಸಂಪತ್ತು ಹೊಂದುವ ಮೂಲಕ ಅರ್ನಾಲ್ಟ್ ಶ್ರೀಮಂತರ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೆ ಏರಿದ್ದಾರೆ.