ಬ್ಯಾಂಕಾಕ್: ಇಂದು ಸಂಭವಿಸಿದ ಪ್ರಬಲ ಭೂಕಂಪಕ್ಕೆ ಮ್ಯಾನ್ಮಾರ್ ತತ್ತರಿಸಿದೆ. ಭೀಕರ ಭೂಕಂಪಕ್ಕೆ ಹಲವೆಡೆ ಗಗನಚುಂಬಿ ಕಟ್ಟಡಗಳು ಬಿರುಕುಬಿಟ್ಟಿವೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ ಸಾಗಯಿಂಗ್ ನಗರದ ವಾಯುವ್ಯಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಮ್ಯಾನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ.
ಶುಕ್ರವಾರ ಬೆಳಗ್ಗೆ 11:50ರ ಸುಮಾರಿಗೆ 7.7 ತೀವ್ರಯ ಭೂಕಂಪ ಸಂಭವಿಸಿದೆ. 12:50ರ ಸುಮಾರಿಗೆ 6.8 ತೀವ್ರತೆಯಲ್ಲಿ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಅಲ್ಲದೆ, ಕನಿಷ್ಠ 43 ಕಾರ್ಮಿಕರು ನಾಪತ್ತೆಯಾಗಿದ್ದಾರೆ.