Nepal Violence: ಮೃತರ ಸಂಖ್ಯೆ 25ಕ್ಕೆ ಏರಿಕೆ, ಎಲ್ಲ ವಿಮಾನ ನಿಲ್ದಾಣ ಬಂದ್‌

Sampriya
ಬುಧವಾರ, 10 ಸೆಪ್ಟಂಬರ್ 2025 (16:38 IST)
Photo Credit X
ಕಠ್ಮಂಡು: ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಪರಿಣಾಮವಾಗಿ ಮೃತರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಬೇರೆ ಬೇರೆ ಘಟನೆಯಲ್ಲಿ 633 ಮಂದಿ ಗಾಯಗೊಂಡಿದ್ದಾರೆಂದು ಬುಧವಾರ ನೇಪಾಳ ಸಚಿವಾಲಯ ದೃಢಪಡಿಸಿದೆ. 

ದೇಶದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ತನ್ನ ವಶಕ್ಕೆ ಪಡೆದುಕೊಂಡಿದೆ ಎಂದು ವರದಿಯಾಗಿದೆ. 

ಇನ್ನೂ ಪ್ರತಿಭಟನೆಗಳು ಬುಧವಾರವೂ ವಿಕೋ‍ಪಕ್ಕೆ ತಿರುಗಿದ್ದರಿಂದ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಸ್ ಪಡೆಯಬೇಕು ಮತ್ತು ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ದೇಶವ್ಯಾಪಿ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದ ಹಾಗೇ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. 

ಪೊಲೀಸರು ಕೈಗೊಂಡ ಕ್ರಮದಿಂದಾಗಿ ಸೋಮವಾರ 19 ಪ್ರತಿಭಟನಕಾರರು ಮೃತಪಟ್ಟ ಕಾರಣಕ್ಕೆ ಓಲಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಾವಿರಾರು ಪ್ರತಿಭಟನಕಾರರು ಅವರ ನಿವಾಸಕ್ಕೆ ನುಗ್ಗಿ, ಘೋಷಣೆಗಳನ್ನೂ ಕೂಗಿದ್ದರು. ಇದಾದ ಸ್ವಲ್ಪ ಹೊತ್ತಿನ ಬಳಿಕ ಓಲಿ ಅವರು ತಮ್ಮ ರಾಜೀನಾಮೆ ಘೋಷಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments