Select Your Language

Notifications

webdunia
webdunia
webdunia
webdunia

ಶಾಲೆಗಳಲ್ಲಿ ಹೊಸ ಮಾರ್ಗಸೂಚಿ ಪ್ರಕಟ ?

ಶಾಲೆಗಳಲ್ಲಿ ಹೊಸ ಮಾರ್ಗಸೂಚಿ ಪ್ರಕಟ ?
ಜಾರ್ಖಂಡ್ , ಮಂಗಳವಾರ, 26 ಏಪ್ರಿಲ್ 2022 (13:01 IST)
ಜಾರ್ಖಂಡ್ : ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯ ಏರಿಕೆಯಾಗುತ್ತಿದೆ. ಒಂದೊಂದೆ ರಾಜ್ಯಗಳಲ್ಲಿ ಕಠಿಣ ನಿರ್ಬಂಧಗಳು ಜಾರಿಯಾಗುತ್ತಿದೆ.

ಜಾರ್ಖಂಡ್ನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿದೆ. ಇದರ ಬೆನ್ನಲ್ಲೇ ನಿರ್ಬಂಧ ಜಾರಿಗೊಳಿಸಿದೆ. ಮಾಸ್ಕ್ , ಸಾಮಾಜಿಕ ಅಂತರ ಸೇರಿದಂತೆ ಹಲವು ಸೂಚನೆ ನೀಡಿರುವ ಜಾರ್ಖಂಡ್ ಇದೀಗ ಶಾಲೆಗಳಲ್ಲಿ ಸಭೆ, ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿಷೇಧಿಸಿದೆ.

ಜಾರ್ಖಂಡ್ ಶಿಕ್ಷಣ ಸಚಿವಾಲಯ ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ. ಶಾಲೆಗಳಲ್ಲಿ ಆರೋಗ್ಯ ತಪಾಸಣೆ ಕಡ್ಡಾಯ ಮಾಡಲಾಗಿದೆ. ಸ್ಥಳೀಯ ಆರೋಗ್ಯ ಕೇಂದ್ರಗಳ ಸಹಾಯದೊಂದಿಗೆ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು. ಇನ್ನು ಜಿಲ್ಲಾಡಳಿತ ಶಾಲೆಗಳಲ್ಲಿ ಯಾದೃಚ್ಛಿಕ COVID-19 ಪರೀಕ್ಷೆ ಮಾಡಬೇಕು ಎಂದು ಮಾರ್ಗಸೂಚಿ ಪ್ರಕಟಿಸಿದೆ.

ಶಾಲೆಗಳಲ್ಲಿ ಬೆಳಗಿನ ಸಭೆ, ಇತರ ಸಭಾ ಕಾರ್ಯಕ್ರಮಗಳು, ಕ್ರೀಡಾ ಚಟುವಟಿಕೆಗಳು, ಸಾಂಸ್ಕೃತಿಕ ಚಟುವಟಿಗಳನ್ನು ಆಯೋಜಿಸದಂತೆ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ. ಶಾಲೆಗಳಲ್ಲಿ ತೀವ್ರ ಮುನ್ನಚ್ಚರಿಕೆ ತೆಗೆದುಕೊಳ್ಳಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ.

ಶಾಲೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಲಾ ಅವರಣ, ಗ್ರಂಥಾಲಯ, ಶಾಲಾ ಕೊಠಡಿಗಳಲ್ಲಿ ಸ್ಯಾನಿಟೈಸೇಶನ್ ಮಾಡುವಂತೆ ಸೂಚಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಸ್ಐ ಪರೀಕ್ಷೆಗೆಂದು ಸತ್ತವರ ಹೆಸರಿನ ಸಿಮ್ ಬಳಕೆ!