Select Your Language

Notifications

webdunia
webdunia
webdunia
webdunia

ತೈಲ ದಾಸ್ತಾನು ಬೆಂಕಿ ಅವಘಡ : 19 ಮಂದಿ ಸಾವು

ತೈಲ
ಜಕಾರ್ತ , ಸೋಮವಾರ, 6 ಮಾರ್ಚ್ 2023 (06:59 IST)
ಜಕಾರ್ತ : ತೈಲ ದಾಸ್ತಾನು ಕೇಂದ್ರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 19 ಮಂದಿ ಮೃತಪಟ್ಟ ಘಟನೆ ಇಂಡೋನೇಷ್ಯಾ ರಾಜಧಾನಿ ಜಕಾರ್ತದಲ್ಲಿ ನಡೆದಿದೆ.
 
ತನ್ಹಾ ಮೆರಹ್ ಪ್ರದೇಶದ ಪ್ಲುಮ್ಪಾಂಗ್ ತೈಲ ಸಂಗ್ರಹ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಸುಟ್ಟ ಮನೆಗಳು ಹಾಗೂ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿರುವ ಮೂವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ಪಶ್ಚಿಮ ಜಾವಾ ಪ್ರಾಂತ್ಯದ ಪೆರ್ಟಮಿನಾದ ಬಲೋಂಗನ್ ರಿಫೈನರಿಯಿಂದ ಡಿಪೋ ಇಂಧನವನ್ನು ಪಡೆದಿದ್ದರು. ಇದರಿಂದಾಗಿ ಹೆಚ್ಚಿನ ಒತ್ತಡವಾಗಿ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರ ವಿರುದ್ದ ಹರಿಹಾಯ್ದ ಹೆಚ್ ಡಿ ಕುಮಾರಸ್ವಾಮಿ