Webdunia - Bharat's app for daily news and videos

Install App

Operation Sindoor: ಮತ್ತೆ ಬಾಲ ಬಿಚ್ಚಿದ ಪಾಪಿಸ್ತಾನ: ಪ್ರತಿದಾಳಿಗೆ ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

Sampriya
ಬುಧವಾರ, 7 ಮೇ 2025 (18:46 IST)
Photo Courtesy X
ಇಸ್ಲಾಮಾಬಾದ್‌: ಪಹಲ್ಗಾಮ್‌ನಲ್ಲಿ ಎರಡು ವಾರಗಳ ಹಿಂದೆ ನಡೆದಿದ್ದ ಹಿಂದೂಗಳ ನರಮೇಧಕ್ಕೆ ಭಾರತ ಪ್ರತೀಕಾರದ ದಾಳಿ ನಡೆಸಿದೆ. ʻಆಪರೇಷನ್‌ ಸಿಂಧೂರʼ ಹೆಸರಿನಡಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ  9 ಉಗ್ರ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ.

ಭಾರತ ಸೇನೆಯ ದಾಳಿಯಿಂದ ಪತರಗುಟ್ಟಿರುವ ಪಾಕ್‌ ಈಗ ಮತ್ತೆ ಬಾಲ ಬಿಚ್ಚುವ ಮಾತನ್ನಾಡುತ್ತಿದೆ. ಭಾರತದ ವಿರುದ್ಧ ದಾಳಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಸೇನೆಗೆ ಪರಮಾಧಿಕಾರ ನೀಡಿದ್ದಾರೆ ಎಂದು ವರದಿಯಾಗಿದೆ.

ಇಂದು ಮಧ್ಯಾಹ್ನದ ಬಳಿಕ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ಕರೆದ ಪ್ರಧಾನಿ ಶೆಹಬಾಜ್ ಶರೀಫ್ ಭಾರತದ ಪ್ರತೀಕಾರದ ದಾಳಿಯನ್ನ ಖಂಡಿಸಿದ್ದಾರೆ. ಅಪ್ರಚೋದಿತ ಮತ್ತು ಕಾನೂನುಬಾಹಿರ ಯುದ್ಧ ಕೃತ್ಯ ಎಂದು ಕರೆದಿದ್ದಾರೆ. ಅಲ್ಲದೇ ಭಾರತದ ವಿರುದ್ಧ ದಾಳಿಗೆ ಸೇನೆಗೆ ಅಧಿಕಾರ ನೀಡಿದ್ದಾರೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

ಮತ್ತೊಂದೆಡೆ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಯೂಟರ್ನ್ ಹೊಡೆದಿದ್ದಾರೆ. ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯಿಸುತ್ತದೆ. ಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಬಗೆಯ ಕ್ರಮಕೈಗೊಳ್ಳುವುದಿಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ನತೆಯನ್ನು ಶಮನಗೊಳಿಸಲು ಸಿದ್ಧ ಎಂದು  ಆಸಿಫ್ ಯೂಟರ್ನ್ ಹೊಡೆದಿದ್ದಾರೆ.

ಪಾಕಿಸ್ತಾನದ ಬಹವಾಲ್ಪುರದಲ್ಲಿ ನಡೆದ ಭಾರತದ ವೈಮಾನಿಕ ದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಸಹಚರರು ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಹೇಳಿರುವುದಾಗಿ ವರದಿಯಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಂಧೂರರಾಮಯ್ಯನಾದ ಸಿದ್ದರಾಮಯ್ಯ: ಸಿಎಂ ವರಸೆ ಬಗ್ಗೆ ಪ್ರತಾಪ ಸಿಂಹ ಟೀಕೆ

ನಮ್ಮ ಅಮಾಯಕರನ್ನು ಕೊಂದವರನ್ನಷ್ಟೇ ನಾವು ಕೊಂದಿದ್ದೇವೆ: ಅಪರೇಷನ್ ಸಿಂಧೂರ್‌ ಬಗ್ಗೆ ರಾಜನಾಥ್‌ ಸಿಂಗ್ ಬಿಚ್ಚು ಮಾತು

Operation Sindoor: ಪಾಕಿಸ್ತಾನಿಗಳ ಪರಿಸ್ಥಿತಿ ಈಗ ಹೇಗಿರುತ್ತದೆ ಎಂದು ಈ ವಿಡಿಯೋ ನೋಡಿದ್ರೆ ಸಾಕು

Operation Sindoor: ಮಾಜಿ ಸೇನಾ ಮುಖ್ಯಸ್ಥರ ಈ ಟ್ವೀಟ್ ನೋಡಿದ್ರೆ ಮತ್ತೆ ಪಾಕಿಗಳ ಬುಡ ಅಲ್ಲಾಡೋದು ಗ್ಯಾರಂಟಿ

Operation Sindoor: 200ಕ್ಕೂ ಅಧಿಕ ವಿಮಾನ ಹಾರಾಟಗಳ ರದ್ದು, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments