ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಲಾಗಿದೆ- ಟ್ರಂಪ್ ಸ್ಪಷ್ಟನೆ

ಭಾನುವಾರ, 15 ಸೆಪ್ಟಂಬರ್ 2019 (06:56 IST)
ವಾಷಿಂಗ್ಟನ್ : ಮೋಸ್ಟ್ ವಾಂಟೆಡ್ ಭಯೋತ್ಪಾದಕ, ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ, ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಆಗಸ್ಟ್ ಮೊದಲ ವಾರದಲ್ಲೇ ಹಮ್ಜಾ ಬಿನ್ ನನ್ನು ಹತ್ಯೆ ಮಾಡಲಾಗಿದೆ ಎಂದ ಯುಎಸ್ ಗುಪ್ತಚರ ಸಂಸ್ಥೆಗಳು ವರದಿ ಮಾಡಿದ್ದವು. ಕಳೆದ ಎರಡು ವರ್ಷಗಳ ಅಮೆರಿಕ ಸೇನೆಯ ಕಾರ್ಯಾಚರಣೆಯಲ್ಲಿ ಹಮ್ಜಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಿದೆ ಎಂದು ಸ್ವತಃ ಡೊನಾಲ್ಡ್ ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.


ಒಸಾಮಾ ಬಿನ್ ಲಾಡೆನ್ ಪಾಕಿಸ್ತಾನದ ಅಬೋಟಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದು, ಅಮೆರಿಕದ ನೇವೀ ಸೀಲ್ ಪಡೆ 2011 ರ ಮೇ 2 ರಂದು ಮಹತ್ದದ ಕಾರ್ಯಾಚರಣೆ ನಡೆಸಿ ಆತನನ್ನು ಹೊಡೆದುರುಳಿಸಿತ್ತು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದ ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಈ ಬಾರಿ ಅಮೆಜಾನ್​, ಫ್ಲಿಪ್​ಕಾರ್ಟ್​ ನಲ್ಲಿ ಹಬ್ಬದ ಆಫರ್ ಗಳಿಗೆ ಬೀಳುತ್ತಾ ಬ್ರೇಕ್