ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

Sampriya
ಭಾನುವಾರ, 19 ಅಕ್ಟೋಬರ್ 2025 (10:32 IST)
Photo Credit X
ಇಸ್ಲಾಮಾಬಾದ್: ಒಂದು ವಾರಗಳ ಘರ್ಷಣೆಯ ಬಳಿಕ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಕುರಿತು ಭಾನುವಾರ ಕತಾರ್ ವಿದೇಶಾಂಗ ಸಚಿವಾಲಯ ಘೋಷಣೆ ಮಾಡಿವೆ.

ಎರಡು ರಾಷ್ಟ್ರಗಳ ನಡುವೆ ನಡೆದ ಸಂಘರ್ಷದಲ್ಲಿ ಹಲವು ಮಂದಿ ಮೃತಪಟ್ಟಿದ್ದರು. ಅದರಲ್ಲೂ ಅಫ್ಘಾನಿಸ್ತಾನದ ಯುವ ಕ್ರಿಕಿಟಿಗರು ಸಾವನ್ನಪ್ಪಿದ್ದು, ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. 

ಉಭಯ ರಾಷ್ಟ್ರಗಳ ನಡುವಿನ ಸಂಘರ್ಷವನ್ನು ಶಮನಗೊಳಿಸಲು ಕತಾರ್ ಹಾಗೂ ಟರ್ಕಿ ಮಧ್ಯಸ್ಥಿಕೆ ವಹಿಸಿವೆ. ಅದರಂತೆ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಿಯೋಗಗಳು ದೋಹಾಕ್ಕೆ ಭೇಟಿ ನೀಡಿದ್ದವು. ಉಭಯ ರಾಷ್ಟ್ರಗಳ ರಕ್ಷಣಾ ಸಚಿವರು ದೋಹಾಗೆ ಭೇಟಿ ನೀಡಿದ್ದವು. ಮಾತುಕತೆ ಬಳಿಕ ಇದೀಗ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ.

ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ರಾಷ್ಟ್ರಗಳು ಶಾಶ್ವತ ಶಾಂತಿ ಮತ್ತು ಸ್ಥಿರತೆಯನ್ನು ಕ್ರೋಢೀಕರಿಸಲು ಕಾರ್ಯವಿಧಾನಗಳನ್ನು ಸ್ಥಾಪಿಸಲು ಹಾಗೂ ಕದನ ವಿರಾಮದ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಮಾತುಕತೆಗಳನ್ನು ನಡೆಸಲು ಒಪ್ಪಿಕೊಂಡಿವೆ ಎಂದು ಕತಾರ್ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ತೇಜಸ್ವಿ ಸೂರ್ಯ ಅಮವಾಸ್ಯೆ ಆದ್ರೆ ನೀವೇನು ಹುಣ್ಣಿಮೆ ಚಂದ್ರನಾ: ಸಿದ್ದರಾಮಯ್ಯ ತೇಜಸ್ವಿ ಫ್ಯಾನ್ಸ್ ಪ್ರಶ್ನೆ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಮುಂದಿನ ಸುದ್ದಿ
Show comments