ಅಫ್ಗಾನಿಸ್ತಾನ ಮೇಲೆ ಮತ್ತೇ ಪ್ರತೀಕಾರ ತೀರಿಸಿಕೊಂಡ ಪಾಕ್‌, ಗಡಿಯಲ್ಲಿ ಹೆಚ್ಚಿದ ಸಂಘರ್ಷ

Sampriya
ಬುಧವಾರ, 15 ಅಕ್ಟೋಬರ್ 2025 (19:46 IST)
Photo Credit X
ಕಾಬುಲ್: ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ಗಡಿಯಲ್ಲಿ ಸಂಘರ್ಷ ಜೋರಾಗಿದ್ದು, ಇದೀಗ ಅಫ್ಗಾನಿಸ್ತಾನದ ಕಂದಹಾರ್‌ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ ದಾಳಿಯಲ್ಲಿ 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಪಾಕಿಸ್ತಾನ ಬುಧವಾರ ಅಫ್ಗಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ವಾಯುದಾಳಿ ನಡೆಸಿದೆ ಎಂದು ಅಫ್ಗಾನ್ ಮತ್ತು ಪಾಕಿಸ್ತಾನ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಇನ್ನೂ ಮಂಗಳವಾರ ಅಫ್ಗಾನ್ ಮತ್ತು ಪಾಕಿಸ್ತಾನ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಅಫ್ಗಾನಿಸ್ತಾನದಲ್ಲಿ 12ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದರು. ಇನ್ನೂ ಅಫ್ಗಾನಿಸ್ತಾನದ ತಾಲೀಬಾನ್‌ಗಳು ನಡೆಸಿದ ಪ್ರತೀಕಾರದ ದಾಳಿಯಲ್ಲಿ 6 ಪಾಕ್‌ ಸೈನಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು.  ಬುಧವಾರ ಮಧ್ಯಾಹ್ನದ ವರದಿ ಪ್ರಕಾರ ಪಾಕಿಸ್ತಾನಿ ಸೇನೆಯು ಕನಿಷ್ಠ 40 ಮಂದಿ ಅಫ್ಗಾನಿಸ್ತಾನದ ತಾಲಿಬಾನ್ ದಾಳಿಕೋರರನ್ನು ಕೊಂದಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದಲ್ಲಿ ದಾಳಿಗಳನ್ನು ಹೆಚ್ಚಿಸಿರುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಫ್ಗಾನಿಸ್ತಾನದ ತಾಲಿಬಾನ್ ಸರ್ಕಾರವನ್ನು ಪಾಕಿಸ್ತಾನ ಒತ್ತಾಯಿಸಿತ್ತು. ಅಫ್ಗಾನಿಸ್ತಾನದಿಂದಲೇ ಉಗ್ರರು ಕಾರ್ಯಾಚರಿಸುತ್ತಿದ್ದಾರೆ ಎಂದು ಪಾಕಿಸ್ತಾನ ಹೇಳಿತ್ತು. ಅದಾದ ಬಳಿಕ ಈ ಬೆಳವಣಿಗೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಫಘಾನಿಸ್ತಾನದ ತಾಲಿಬಾನ್‌ನ ಪ್ರತೀಕಾರದ ದಾಳಿಗೆ ಪಾಕಿಸ್ತಾನದ 6 ಸೈನಿಕರು ಸಾವು

ಬೆಂಗಳೂರನ್ನು ಟೀಕಿಸುತ್ತಿರುವವರು 25ವರ್ಷಗಳ ಹಿಂದೆ ಎಲ್ಲಿದ್ದರು

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments