Webdunia - Bharat's app for daily news and videos

Install App

ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಪಾಕ್ ಪ್ರಧಾನಿಗೆ ದಂಡ?

Webdunia
ಬುಧವಾರ, 23 ಮಾರ್ಚ್ 2022 (13:37 IST)
ಇಸ್ಲಾಮಾಬಾದ್ : ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಚುನಾವಣಾ ಆಯೋಗವು 50,000 ರೂ. ದಂಡ ವಿಧಿಸಿದೆ.

ಖೈಬರ್-ಪಖ್ತುಂಖ್ವಾದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಸ್ವಾತ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಲ್ಗೊಂಡು ಭಾಷಣ ಮಾಡುವ ಮೂಲಕ ಪಾಕ್ ಪ್ರಧಾನಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಪರಿಣಾಮವಾಗಿ ಆಯೋಗ ದಂಡ ಹಾಕಿದೆ.

ಸಾರ್ವಜನಿಕ ರ್ಯಾಲಿ ಆಯೋಜಿಸುವುದನ್ನು ಪಾಕಿಸ್ತಾನದ ಚುನಾವಣಾ ಆಯೋಗವು ನಿರ್ಬಂಧಿಸಿತ್ತು. ಆದರೆ ಪ್ರಧಾನ ಮಂತ್ರಿ, ಆಯೋಗದ ಆದೇಶವನ್ನು ಉಲ್ಲಂಘಿಸಿದ್ದರು.

ಮಾ.31ರಂದು ಖೈಬರ್-ಪಖ್ತುಂಖ್ವಾದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಡಳಿತದಲ್ಲಿರುವ ಯಾರೂ ಸಹ ಚುನಾವಣೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ರ್ಯಾಲಿ ನಡೆಸುವಂತಿಲ್ಲ ಎಂದು ನೀತಿ ಸಂಹಿತೆಯಲ್ಲಿ ಉಲ್ಲೇಖಿಸಲಾಗಿತ್ತು. 

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ ಇಮ್ರಾನ್ ಖಾನ್ಗೆ ಆಯೋಗ ಎರಡು ಬಾರಿ ನೋಟಿಸ್ ನೀಡಿದೆ. ಕೊನೆಯ ನೋಟಿಸ್ ಮಾ.21ರಂದು ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments