India Pakistan: ಭಾರತ ಮಾರುಕಟ್ಟೆಗೆ ಲಗ್ಗೆಯಿಡಲು ಕಳ್ಳದಾರಿ ಕಂಡುಕೊಂಡ ಪಾಕಿಸ್ತಾನ

Krishnaveni K
ಸೋಮವಾರ, 5 ಮೇ 2025 (09:46 IST)
ನವದೆಹಲಿ: ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ಪಾಕಿಸ್ತಾನದ ವಸ್ತುಗಳಿಗೆ ಭಾರತದ ಮಾರುಕಟ್ಟೆಯಲ್ಲಿ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ತನ್ನ ವಸ್ತುಗಳನ್ನು ಭಾರತಕ್ಕೆ ರವಾನಿಸಲು ಪಾಕಿಸ್ತಾನ ಕಳ್ಳದಾರಿಯೊಂದನ್ನು ಕಂಡುಕೊಂಡಿದೆ.

ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನದೊಂದಿಗೆ ಭಾರತ ಎಲ್ಲಾ ವ್ಯಾಪಾರ, ವಹಿವಾಟುಗಳನ್ನು ಸ್ಥಗಿತಗೊಳಿಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕಿತು. ಹೀಗಾಗಿ ತನ್ನ ದೇಶದಿಂದ ವಾಣಿಜ್ಯ ವಸ್ತುಗಳನ್ನು ಭಾರತಕ್ಕೆ ರವಾನಿಸಲು ಪಾಕಿಸ್ತಾನ ಕಳ್ಳ ದಾರಿ ಹಿಡಿದಿದೆ.

ಯುಎಇನಂತಹ ಮೂರನೇ ರಾಷ್ಟ್ರದ ಲೇಬಲ್ ಅಂಟಿಸಿ ಭಾರತಕ್ಕೆ ಕಳುಹಿಸುವ ದಾರಿ ಕಂಡುಕೊಂಡಿದೆ.  ಪಹಲ್ಗಾಮ್ ದಾಳಿಯಾದ ಬೆನ್ನಲ್ಲೇ ಪಾಕಿಸ್ತಾನದಿಂದ ನೇರ ಮತ್ತು ಪರೋಕ್ಷ ವ್ಯಾಪಾರ, ವಹಿವಾಟುಗಳಿಗೆ ಭಾರತ ನಿರ್ಬಂಧ ವಿಧಿಸಿತ್ತು. ಇದೀಗ ಪಾಕಿಸ್ತಾನದ ಕಳ್ಳ ಹೆಜ್ಜೆ ಕಂಡುಹಿಡಿದಿರುವ ಭಾರತದ ವಿದೇಶ ಆಮದು ವ್ಯವಹಾರಗಳ ಇಲಾಖೆ ಆಮದಾಗಿ ಬರುವ ಎಲ್ಲಾ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಸೂಚನೆ ನೀಡಿದೆ.

ಪಾಕಿಸ್ತಾನದಿಂದ ಭಾರತಕ್ಕೆ ಕೃಷಿ ಉತ್ಪನ್ನಗಳನ್ನು ಕಳೆದ ಆರ್ಥಿಕ ವರ್ಷದಲ್ಲಿ ಆಮದು ಮಾಡಿಕೊಳ್ಳಲಾಗಿತ್ತು. ಪಾಕಿಸ್ತಾನಕ್ಕೆ ಭಾರತ ಕಳುಹಿಸಿಕೊಡುವ ವಸ್ತುಗಳಿಗೆ ಹೋಲಿಸಿದರೆ ಭಾರತ ಪಾಕಿಸ್ತಾನದಿಂದ ಆಮದು ಮಾಡಿಕೊಳ್ಳುವ ವಸ್ತುಗಳು ತೀರಾ ಕಡಿಮೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments