Select Your Language

Notifications

webdunia
webdunia
webdunia
webdunia

ಸಂಸತ್ ಭವನಕ್ಕೆ ಬೆಂಕಿ!

ಸಂಸತ್ ಭವನಕ್ಕೆ ಬೆಂಕಿ!
ಟ್ರಿಪೋಲಿ , ಸೋಮವಾರ, 4 ಜುಲೈ 2022 (10:02 IST)
ಟ್ರಿಪೋಲಿ : ಲಿಬಿಯಾದಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿದೆ.
 
ಸರ್ಕಾರದ ವಿರುದ್ಧ ಬಂಡೆದ್ದ ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಬೆಂಕಿ ಹಚ್ಚಿದ್ದಾರೆ.

ಸರ್ಕಾರವನ್ನು ಈ ಕೂಡಲೇ ವಿಸರ್ಜಿಸಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ಸಂಸತ್ ಭವನದ ಕಡೆಗೆ ಮೆರವಣಿಗೆ ಹೋಗುತ್ತಿದ್ದ ಪ್ರತಿಭಟನಾಕಾರರನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರನು ಸಂಸತ್ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. 

ಟ್ರಿಪೋಲಿ, ಟೋಬ್ರೂಕ್ನ ಸೇರಿದಂತೆ ಲಿಬಿಯಾದ ಅನೇಕ ನಗರಗಳಲ್ಲಿ ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಸಂಸತ್ತಿನ ಕಟ್ಟಡದ ಮೇಲೆ ನಡೆಸಿರುವ ಈ ದಾಳಿಯನ್ನು ವಿಶ್ವಸಂಸ್ಥೆ ಖಂಡಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶಿಂಧೆಗೆ ಇಂದು ವಿಶ್ವಾಸ ಪರೀಕ್ಷೆ