Select Your Language

Notifications

webdunia
webdunia
webdunia
webdunia

ಪೆಹಲ್ಗಾಮ್ ದಾಳಿ ಯಾವುದೇ ಸಂದರ್ಭದಲ್ಲೂ ಒಪ್ಪಲಾಗದು: ಉಗ್ರರ ಪೈಶಾಚಿಕ ಕೃತ್ಯಕ್ಕೆ ವಿಶ್ವಸಂಸ್ಥೆ ಖಂಡನೆ

Pahalgam terrorist attack, United Nations Secretary General Antonio Guterres, Prime Minister Narendra Modi

Sampriya

ಕಾಶ್ಮೀರ , ಬುಧವಾರ, 23 ಏಪ್ರಿಲ್ 2025 (14:12 IST)
Photo Courtesy X
ಕಾಶ್ಮೀರ:  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕರ ದಾಳಿಯನ್ನು ವಿಶ್ವಸಂಸ್ಥೆ ತೀವ್ರವಾಗಿ ಖಂಡಿಸಿದೆ.

ನಾಗರಿಕರ ಮೇಲಿನ ದಾಳಿ ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಿ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಗುಟೆರೆಸ್ ಸಂತಾಪ ಸೂಚಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.

28 ಜನರ ಜೀವ ತೆಗೆದ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕರ ದಾಳಿಯನ್ನು ಪ್ರಧಾನ ಕಾರ್ಯದರ್ಶಿ ಬಲವಾಗಿ ಖಂಡಿಸಿದ್ದಾರೆ. ನಾಗರಿಕರ ಮೇಲಿನ ದಾಳಿಗಳನ್ನು ಯಾವುದೇ ಸಂದರ್ಭದಲ್ಲೂ ಒಪ್ಪಲಾಗುವುದಿಲ್ಲ ಎಂದು ಪ್ರಧಾನ ಕಾರ್ಯದರ್ಶಿ ಹೇಖಿರುವುದಾಗಿ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.

ಮಂಗಳವಾರ ಮಧ್ಯಾಹ್ನ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಪ್ರವಾಸಿಗರು ಸೇರಿ 28 ಮಂದಿ ಮೃತಪಟ್ಟಿದ್ದಾರೆ. ಇದು 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿಯಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

Pehalgam terror attack: ಕುಟುಂಬದವರಿಗೆ ನ್ಯಾಯ ಸಿಗಬೇಕು, ಕೇಂದ್ರಕ್ಕೆ ನಮ್ಮ ಬೆಂಬಲವಿದೆ ಎಂದ ಖರ್ಗೆ, ರಾಹುಲ್ ಗಾಂಧಿ