ನವದೆಹಲಿ, ಸೆ 14 : ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡನ್ ಆಯೋಜಿಸಿದ ಕ್ವಾಡ್ ಶೃಂಗಸಭೆಯಲ್ಲಿ ಸೆಪ್ಟೆಂಬರ್ 24ರಂದು ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಭಾರತದ ಪ್ರಧಾನಿ ಜೊತೆಗೆ ಆಸ್ಟ್ರೇಲಿಯಾದ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಮಂತ್ರಿ ಯೋಶಿಹಿಡೆ ಸುಗಾರನ್ನು ಆಹ್ವಾನಿಸಲಾಗಿದೆ.
ಶ್ವೇತಭವನವು ನಾಲ್ಕು ನಾಯಕರು ತಮ್ಮ ಸಂಬಂಧ ಮತ್ತು ಕೋವಿಡ್ -19 ವಿರುದ್ಧ ಹೋರಾಡುವುದು. ಮುಕ್ತ ಇಂಡೋ-ಪೆಸಿಫಿಕ್ ಅನ್ನು ಉತ್ತೇಜಿಸುವುದು ಹಾಗೂ ಮುಂತಾದ ಕ್ಷೇತ್ರಗಳಲ್ಲಿ ಪ್ರಾಯೋಗಿಕ ಸಹಕಾರವನ್ನು ಮುಂದುವರೆಸುವ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಿದರು.
"ಅವರು ಸಮಕಾಲೀನ ಜಾಗತಿಕ ಸಮಸ್ಯೆಗಳಾದ ವಿಮರ್ಶಾತ್ಮಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಸಂಪರ್ಕ ಮತ್ತು ಮೂಲಸೌಕರ್ಯ, ಸೈಬರ್ ಭದ್ರತೆ, ಕಡಲ ಭದ್ರತೆ, ಮಾನವೀಯ ನೆರವು, ವಿಪತ್ತು ಪರಿಹಾರ, ಹವಾಮಾನ ಬದಲಾವಣೆ ಮತ್ತು ಶಿಕ್ಷಣದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಕ್ವಾಡ್ ಶೃಂಗಸಭೆ: ಕ್ವಾಡ್ ಶೃಂಗಸಭೆಯ ನಂತರ, ಸೆಪ್ಟೆಂಬರ್ 25ರಂದು ನ್ಯೂಯಾರ್ಕ್ ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನದ ಉನ್ನತ ಮಟ್ಟದ ವಿಭಾಗದ ಸಾಮಾನ್ಯ ಚರ್ಚೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಈ ವರ್ಷದ ಸಾಮಾನ್ಯ ಚರ್ಚೆಯ ವಿಷಯವೆಂದರೆ 'ಕೋವಿಡ್ -19 ನಿಂದ ಚೇತರಿಸಿಕೊಳ್ಳುವ ಭರವಸೆಯ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು, ಸಮರ್ಥವಾಗಿ ಪುನರ್ನಿರ್ಮಾಣ ಮಾಡುವುದು, ಭೂಮಿಯ ಅಗತ್ಯಗಳಿಗೆ ಸ್ಪಂದಿಸುವುದು, ಜನರ ಹಕ್ಕುಗಳನ್ನು ಗೌರವಿಸುವುದು ಮತ್ತು ವಿಶ್ವಸಂಸ್ಥೆಯನ್ನು ಪುನರುಜ್ಜೀವನಗೊಳಿಸುವುದು' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸಪ್ಟೆಂಬರ್ 24ರ ಶೃಂಗಸಭೆ ಮತ್ತು ಸದಸ್ಯರು: ಯುಎಸ್ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಜೋ ಬೈಡನ್ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಲಿದ್ದಾರೆ. ಈ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸುವುದಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್ ಪ್ರಧಾನಿ ಯೋಶಿಹಿಡೆ ಸುಗರನ್ನು ಅಹ್ವಾನಿಸಲಾಗಿದೆ ಎಂದು ಶ್ವೇತಭವನದ ಕಾರ್ಯದರ್ಶಿ ಜೆನ್ ಸಾಕಿ ಹೇಳಿದ್ದಾರೆ.
2017ರಲ್ಲಿ ಕ್ವಾಡ್ ರಚನೆ: ಕಳೆದ 2017ರ ನವೆಂಬರ್ ತಿಂಗಳಿನಲ್ಲಿ ಭಾರತ, ಜಪಾನ್, ಯುಎಸ್ ಮತ್ತು ಆಸ್ಟ್ರೇಲಿಯಾಗಳು ಇಂಡೋ-ಪೆಸಿಫಿಕ್ನಲ್ಲಿನ ನಿರ್ಣಾಯಕ ಸಮುದ್ರ ಮಾರ್ಗಗಳನ್ನು ಯಾವುದೇ ಪ್ರಭಾವದಿಂದ ಮುಕ್ತವಾಗಿಸಲು ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲು ಕ್ವಾಡ್ ಅನ್ನು ಸ್ಥಾಪಿಸಲಾಯಿತು.