Select Your Language

Notifications

webdunia
webdunia
webdunia
webdunia

ಈ ವರ್ಷಾಂತ್ಯಕ್ಕೆ ಪ್ರಧಾನಿ ಮೋದಿ ಅಮೆರಿಕಾ ಪ್ರವಾಸ

ಈ ವರ್ಷಾಂತ್ಯಕ್ಕೆ ಪ್ರಧಾನಿ ಮೋದಿ ಅಮೆರಿಕಾ ಪ್ರವಾಸ
NewDelhi , ಬುಧವಾರ, 29 ಮಾರ್ಚ್ 2017 (09:23 IST)
ನವದೆಹಲಿ: ನಿನ್ನೆಯಷ್ಟೇ ಉತ್ತರ ಪ್ರದೇಶ ಚುನಾವಣಾ ಗೆಲುವಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಗೆ ಶುಭ ಕೋರಿದ್ದರು. ಇಂದೀಗ ಮೋದಿ ಅಮೆರಿಕಾ ಪ್ರವಾಸ ಮಾಡಲಿದ್ದಾರೆಂದು ವೈಟ್ ಹೌಸ್ ಮೂಲಗಳು ಹೇಳಿವೆ.

 

ವರ್ಷಾಂತ್ಯಕ್ಕೆ ಮೋದಿ ಅಮೆರಿಕಾ ಪ್ರವಾಸ ಮಾಡಲಿದ್ದಾರೆ ಎಂದು ವೈಟ್ ಹೌಸ್ ಹೇಳಿಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್  ಟ್ರಂಪ್ ಮೋದಿ ಭೇಟಿ ಮಾಡಲು ಉತ್ಸುಕರಾಗಿದ್ದಾರೆ ಎಂದು ಅದು ಹೇಳಿಕೊಂಡಿದೆ.

 
ಅಧ್ಯಕ್ಷರಾದ ಮೇಲೆ ಟ್ರಂಪ್ ಎರಡು ಬಾರಿ ದೂರವಾಣಿ ಮೂಲಕ ಪ್ರಧಾನಿ ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಮೋದಿಯನ್ನು ಒಬ್ಬ ಶ್ರೇಷ್ಠ ವ್ಯಕ್ತಿ ಎಂದು ಹೊಗಳಿದ್ದರು. ಒಬಾಮಾ ಅಧ್ಯಕ್ಷರಾಗಿದ್ದಾಗ ಅಮೆರಿಕಾ ಜತೆ ಭಾರತ ಉತ್ತಮ ಬಾಂಧವ್ಯ ಹೊಂದಿತ್ತು. ಆಗ ನಾಲ್ಕು ಬಾರಿ ಅಮೆರಿಕಾಕ್ಕೆ ಭೇಟಿ ಮಾಡಿದ್ದ ಮೋದಿಗೆ ಅಭೂತಪೂರ್ವ ಸ್ವಾಗತ ದೊರಕಿತ್ತು. ಈಗಲೂ ಅದನ್ನೇ ಮುಂದುವರಿಸುವ ನಿರೀಕ್ಷೆಯಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ವೈಯಕ್ತಿಕ ದಾಖಲೆಗಳು ಬಹಿರಂಗ! ಪತ್ನಿ ಸಾಕ್ಷಿ ದೂರು!