ನವದೆಹಲಿ: ಬಿಐಎಂಎಸ್ ಟಿಇಸಿ ಶೃಂಗದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಬಾಂಗ್ಲಾದೇಶದ ಹಂಗಾಮಿ ಪ್ರಧಾನಿ ಮೊಹಮ್ಮದ್ ಯೂನಸ್ ಗೆ ಹಿಂದೂಗಳ ರಕ್ಷಣೆ ಮಾಡುವಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ಶೇಖ್ ಹಸೀನಾ ಪದಚ್ಯುತಿ ಬಳಿಕ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ವ್ಯಾಪಕ ಹಿಂಸಾಚಾರ, ಕೊಲೆ, ಅತ್ಯಾಚಾರ ನಡೆದಿತ್ತು. ಇದರ ಬಗ್ಗೆ ಭಾರತ ಈಗಾಗಲೇ ಹಲವು ಬಾರಿ ತನ್ನ ಆತಂಕ ವ್ಯಕ್ತಪಡಿಸಿದೆ.
ಇತ್ತೀಚೆಗೆ ಅಮೆರಿಕಾಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿಗೆ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡಾ ಬಾಂಗ್ಲಾದೇಶವನ್ನು ಭಾರತವೇ ನೋಡಿಕೊಳ್ಳಲಿದೆ ಎಂದಿದ್ದರು. ಇಂದು ಮೊಹಮ್ಮದ್ ಯೂನಸ್ ರನ್ನು ಭೇಟಿಯಾದ ಪ್ರಧಾನಿ ಮೋದಿ ಬಾಂಗ್ಲಾದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ಮಾಡುವಂತೆ ಕೋರಿದ್ದಾರೆ.
ಇದುವರೆಗೆ ಅಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ, ಕೊಲೆ ಪ್ರಕರಣಗಳ ತನಿಖೆ ಮಾಡಬೇಕು. ಮುಂದೆ ಅಲ್ಪಸಂಖ್ಯಾತರ ಮೇಲೆ ದಾಳಿಗಳಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.