Select Your Language

Notifications

webdunia
webdunia
webdunia
webdunia

ಇಂದು ಮತ್ತೆ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಭೇಟಿ

webdunia
ಮಂಗಳವಾರ, 24 ಸೆಪ್ಟಂಬರ್ 2019 (09:56 IST)
ನ್ಯೂಯಾರ್ಕ್: ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಜೋಡಿ ಮೊನ್ನೆಯಷ್ಟೇ ಹೌಡಿ ಮೋದಿ ಕಾರ್ಯಕ್ರಮದ ಮೂಲಕ ವಿಶ್ವಕ್ಕೇ ತಮ್ಮಿಬ್ಬರ ಸ್ನೇಹದ ಬಗ್ಗೆ ಸಂದೇಶ ಸಾರಿದ್ದರು.


ಇದೀಗ ಮತ್ತೆ ಡೊನಾಲ್ಡ್ ಟ್ರಂಪ್-ಮೋದಿ ಪರಸ್ಪರ ಮುಖಾ ಮುಖಿಯಾಗಲಿದ್ದಾರೆ. ಇಂದು ವಿಶ್ವಸಂಸ್ಥೆಯ ಮಹಾಅಧಿವೇಶನದಲ್ಲಿ ಮತ್ತೆ ಈ ಇಬ್ಬರೂ ನಾಯಕರು ಭೇಟಿಯಾಗಲಿದ್ದಾರೆ.

ಇಂದು ಮಧ್ಯಾಹ್ನ ಈ ಇಬ್ಬರೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಭಾರತ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ. ಈಗಾಗಲೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೂಡಾ ಟ್ರಂಪ್ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಇಮ್ರಾನ್ ಖಾನ್ ಗೆ ಟ್ರಂಪ್ ಭಾರತವೂ ಒಪ್ಪಿದರೆ ಕಾಶ್ಮೀರ ವಿಚಾರದಲ್ಲಿ ಸಂಧಾನ ನಡೆಸಲು ಸಿದ್ಧ ಎಂದಿದ್ದರು.  ಹೀಗಾಗಿ ಟ್ರಂಪ್ ಇಂದು ಪ್ರಧಾನಿ ಮೋದಿ ಭೇಟಿ ವೇಳೆ ಈ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇಲ್ಲದಿಲ್ಲ.

Share this Story:

Follow Webdunia Hindi

ಮುಂದಿನ ಸುದ್ದಿ

ಆಧಾರ್ ಕಾರ್ಡ್ ಗಿಂತಲೂ ಸೂಪರ್ ಪವರ್ ಇರುವ ಐಡೆಂಟಿಟಿ ಕಾರ್ಡ್ ಬರಲಿದೆ!