ಕೊರೊನಾ ವೈರಸ್ ನಿಯಂತ್ರಣಕ್ಕೆ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಶನಿವಾರ, 14 ಮಾರ್ಚ್ 2020 (11:39 IST)

ಅಮೇರಿಕಾ: ವಿಶ್ವದೆಲ್ಲೆಡೆ ಕೊರೊನಾ ಸೋಂಕಿನ ಭೀತಿ ಹೆಚ್ಚಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.

 

ಶ್ವೇತ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡೊನಾಲ್ಡ್ ಟ್ರಂಪ್, ಫೆಡರಲ್ ಸರ್ಕಾರದ ಸಂಪೂರ್ಣ ಅಧಿಕಾರವನ್ನು ಸಡಿಲಿಸಲು ಅಧಿಕೃತವಾಗಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗುತ್ತಿದೆ. ಮುಂದಿನ 8 ವಾರಗಳ ಕಾಲ ಪರಿಸ್ಥಿತಿ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ.

 

ಹಾಗೇ ಕೊರೊನಾ ವಿರುದ್ಧ ಹೋರಾಟಕ್ಕೆ 50 ಬಿಲಿಯನ್ ಡಾಲರ್ ಅನ್ನು ಮೀಸಲಿಡಲಾಗಿದೆ. ಅಮೇರಿಕಾದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರ ಚಿಕಿತ್ಸೆಗೆ ತುರ್ತು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.   

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಆರ್ ಎಸ್ ಎಸ್ ನ ಮಹಾಸಮಾವೇಶ ರದ್ದಾಗದಕ್ಕೆ ಟ್ವೀಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ