ಅಮೆರಿಕದಲ್ಲಿ ಸಿಕ್ಕಾ ಭವ್ಯ ಸ್ವಾಗತಕ್ಕೆ ಮನಸೋತ ರಾಹುಲ್ ಗಾಂಧಿ

Sampriya
ಭಾನುವಾರ, 8 ಸೆಪ್ಟಂಬರ್ 2024 (16:28 IST)
Photo Courtesy X
ವಾಷಿಂಗ್ಟನ್: ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡ ಟೆಕ್ಸಾಸ್‌ನ ಡಲ್ಲಾಸ್‌ಗೆ ಆಮಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ  ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸ್ವಾಗತ ಕೋರಿದರು.

ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಸೇರಿದಂತೆ ಅನಿವಾಸಿ ಭಾರತೀಯರ ತಂಡದ ಸದಸ್ಯರು ಹೂ ನೀಡಿ ಸ್ವಾಗತಕೋರಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿಟ್ಟಿನಲ್ಲಿ ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇನೆ. ನನಗೆ ದೊರೆತ ಆತ್ಮೀಯ ಸ್ವಾಗತದಿಂದ ನಾನು ನಿಜವಾಗಿಯೂ ಸಂತೋಷಗೊಂಡಿದ್ದೇನೆ ಎಂದು ಹೇಳಿದರು.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಅವರು, ಈ ಭೇಟಿಯ ಸಮಯದಲ್ಲಿ ನಮ್ಮ ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಅರ್ಥಪೂರ್ಣ ಚರ್ಚೆಗಳು ಮತ್ತು ಒಳನೋಟವುಳ್ಳ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಮುಂದಿನ ಸುದ್ದಿ
Show comments