ಶಾಂಘೈ ಸಹಕಾರ ಸಂಸ್ಥೆ ದಾಖಲೆಗೆ ಸಹಿ ಹಾಕಲು ನಿರಾಕರಿಸಿದ ರಾಜನಾಥ್ ಸಿಂಗ್

Krishnaveni K
ಗುರುವಾರ, 26 ಜೂನ್ 2025 (13:41 IST)
ನವದೆಹಲಿ: ಚೀನಾ ಮತ್ತು ಪಾಕಿಸ್ತಾನದ ಭಯೋತ್ಪಾದನೆ ವಿರುದ್ಧದ ಮೃದು ಧೋರಣೆಯನ್ನು ವಿರೋಧಿಸಿ ಶಾಂಘೈ ಸಹಕಾರ ಸಂಸ್ಥೆಯ ದಾಖಲೆಗೆ ಸಹಿ ಹಾಕಲು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿರಾಕರಿಸಿದ್ದಾರೆ.

ಶಾಂಘೈ ಸಹಕಾರ ಸಂಸ್ಥೆಯ ಶೃಂಗ ಸಭೆಯಲ್ಲಿ 10 ರಾಷ್ಟ್ರಗಳ ರಕ್ಷಣಾ ಸಚಿವರು ಪಾಲ್ಗೊಂಡಿದ್ದಾರೆ. ಇವರಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡಾ ಸೇರಿದ್ದಾರೆ. ಚೀನಾದ ಕ್ವಿಂಗ್ಡಾವೊದಲ್ಲಿ ನಡೆಯುತ್ತಿರುವ ಶೃಂಗ ಸಭೆಯಲ್ಲಿ ಅವರು ಪಾಲ್ಗೊಂಡಿದ್ದಾರೆ.

ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ, ಚೀನಾ ಮೃದು ಧೋರಣೆ ಅನುಸರಿಸುತ್ತಿರುವ ಕಾರಣಕ್ಕೆ ಭಾರತದ ರಕ್ಷಣಾ ಸಚಿವರು ಸಹಿ ಹಾಕಲು ನಿರಾಕರಿಸಿದ್ದಾರೆ. ಯಾವುದೇ ದೇಶ ಎಷ್ಟೇ ಶಕ್ತಿಶಾಲಿಯಾಗಿದ್ದರೂ ಅದಕ್ಕೆ ಇತರೆ ದೇಶಗಳ ಬೆಂಬಲ ಬೇಕಾಗುತ್ತದೆ. ಸರ್ವೇ ಜನಾಃ ಸುಖಿನೋ ಭವಂತು ಎಂಬ ಭಾವನೆಯಿರಬೇಕು. ಇದರಿಂದ ಎಲ್ಲರಿಗೂ ಶಾಂತಿ, ನೆಮ್ಮದಿಯಿರುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಯಾವುದೇ ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ. ಭಾರತಕ್ಕೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ. ಭಯೋತ್ಪಾದನೆಯನ್ನು ಎಲ್ಲಾ ಎಸ್ ಸಿಒ ರಾಷ್ಟ್ರಗಳು ಒಕ್ಕೊರಲಿನಿಂದ ಖಂಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments